ಈ ದೀಪಾವಳಿಯಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿದ ಶೇ.71 ರಷ್ಟು ಭಾರತೀಯರು!
ಈ ದೀಪಾವಳಿಯ ಅವಧಿಯಲ್ಲಿ ಭಾರತೀಯರು ಚೀನಾ ಉತ್ಪನ್ನಗಳ ಬಹಿಷ್ಕಾರ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಾರೆ.

ನವದೆಹಲಿ: ಈ ದೀಪಾವಳಿಯ ಅವಧಿಯಲ್ಲಿ ಭಾರತೀಯರು ಚೀನಾ ಉತ್ಪನ್ನಗಳ ಬಹಿಷ್ಕಾರ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಾರೆ.
ದೀಪಾವಳಿ ವ್ಯಾಪಾರ-ವಹಿವಾಟಿನಲ್ಲಿ ಚೀನಾಗೆ ಈಗಾಗಲೇ 40,000 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಈಗಾಗಲೇ ಸಿಎಐಟಿ ಮೂಲಕ ತಿಳಿದುಬಂದಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ ಶೇ.71 ರಷ್ಟು ಭಾರತೀಯರು ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿದ್ದಾರೆ ಎಂದು ಸಿಎಐಟಿ ಮೂಲಕ ತಿಳಿದುಬಂದಿದೆ.
ಲೋಕಲ್ ಸರ್ಕಲ್ಸ್ ನಡೆಸಿರುವ ಸಮೀಕ್ಷೆಯ ಪ್ರಕಾರ ಶೇ.71 ರಷ್ಟು ಜನರು ಮೇಡ್ ಇನ್ ಚೀನಾ ಗುರುತನ್ನು ಹೊಂದಿರುವ ಸರಕುಗಳನ್ನು ಖರೀದಿಸಿಲ್ಲ. ಸಮೀಕ್ಷೆಯಲ್ಲಿ ಕಮ್ಯುನಿಟಿ ಸೋಶಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ 204 ಜಿಲ್ಲೆಗಳಲ್ಲಿ 14,000 ಭಾರತೀಯ ಗ್ರಾಹಕರನ್ನು ಸಮೀಕ್ಷೆಗೊಳಪಡಿಸಿದ್ದು,
ಶೇ.29 ಗ್ರಾಹಕರು ಒಂದು ಅಥವಾ ಒಂದಕ್ಕಿಂತ ಹೆಚ್ಚು ಚೀನಾ ಉತ್ಪಾದಿತ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಈ ಪೈಕಿ ಶೇ.11 ರಷ್ಟು ಅದರ ಬಗ್ಗೆ ಮಾಹಿತಿ ಇಲ್ಲದೇ ಖರೀದಿಸಿದ್ದರೆ ಶೇ.16 ತಿಳಿದೂ ಸಹ ಚೀನಾ ಉತ್ಪನ್ನಗಳನ್ನು ಖರೀದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


