ಅಕ್ಟೋಬರ್‌ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆ ಶೇಕಡ 2.5ರಷ್ಟು ಕುಂಠಿತ
ಅಕ್ಟೋಬರ್ ತಿಂಗಳಲ್ಲಿ ದೇಶದ ಎಂಟು ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನಾ ದರ ಶೇ 2.5 ರಷ್ಟು ಕುಸಿದಿವೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.

ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ದೇಶದ ಎಂಟು ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನಾ ದರ ಶೇ 2.5 ರಷ್ಟು ಕುಸಿದಿವೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.
ಸರ್ಕಾರ ಇಲ್ಲಿ ಬಿಡುಗಡೆ ಮಾಡಿರುವ ಅಂಕಿ -ಅಂಶಗಳಂತೆ, 2020 ರ ಸೆಪ್ಟೆಂಬರ್‌ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆಯಲ್ಲಿ ಶೇ 0.1 ರಷ್ಟು ಕುಸಿತ ಕಂಡುಬಂದಿದೆ. 2019ರ ಅಕ್ಟೋಬರ್ ನಲ್ಲಿ ಈ ದರ ಶೇ 5.5 ರಷ್ಟು ಕುಸಿತ ಕಂಡಿತ್ತು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರಗೆ ಪ್ರಮುಖ ಕೈಗಾರಿಕಾ ವಲಯಗಳ ಉತ್ಪಾದನೆಯಲ್ಲಿ ಶೇ 13 ರಷ್ಟು ಇಳಿಕೆ ಕಂಡುಬಂದಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಶೇ 0.3 ರಷ್ಟು ಕುಸಿತ ಕಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


