ವಾಣಿಜ್ಯ

2020-21 ರ ಜುಲೈ-ಸೆಪ್ಟೆಂಬರ್ ತಿಂಗಳಲ್ಲಿ ದೇಶದ ಜಿಡಿಪಿ ಶೇ.7.5 ರಷ್ಟು ಕುಸಿತ! ದೇಶದಲ್ಲೀಗ ಆರ್ಥಿಕ ಹಿಂಜರಿತ ಅಧಿಕೃತ!

2020 ನೇ ಆರ್ಥಿಕ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿ ಶೇ.7.5 ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರಿ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.

2020-21 ರ ಜುಲೈ-ಸೆಪ್ಟೆಂಬರ್ ತಿಂಗಳಲ್ಲಿ ದೇಶದ ಜಿಡಿಪಿ ಶೇ.7.5 ರಷ್ಟು ಕುಸಿತ! ದೇಶದಲ್ಲೀಗ ಆರ್ಥಿಕ ಹಿಂಜರಿತ ಅಧಿಕೃತ!
ಜಿಡಿಪಿ
Published On :

ಮುಂಬೈ: 2020 ನೇ ಆರ್ಥಿಕ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿ ಶೇ.7.5 ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರಿ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ. ಆದರೆ ಮೊದಲ ತ್ರೈಮಾಸಿಕಕ್ಕೆ ಹೋಲಿಸಿದರೆ ಆರ್ಥಿಕತೆ ಚೇತರಿಕೆ ಕಂಡಿದೆ.

ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ (ಎನ್‌ಎಸ್‌ಒ), ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ನ.27 ರಂದು 2020-21 ನೇ ಸಾಲಿನ ಎರಡನೇ ತ್ರೈಮಾಸಿಕ (ಜುಲೈ-ಸೆಪ್ಟೆಂಬರ್) ಅವಧಿಯ ಜಿಡಿಪಿಯನ್ನು ಸ್ಥಿರ (2011-12) ಮತ್ತು ಪ್ರಸ್ತುತ ಬೆಲೆಗಳ ಲೆಕ್ಕದಲ್ಲಿ ಪ್ರಕಟಿಸಿದ್ದು, ಎರಡನೇ ತ್ರೈಮಾಸಿಕದಲ್ಲಿ ಸ್ಥಿರ ಬೆಲೆಯಲ್ಲಿ ಜಿಡಿಪಿ 33.14 ಲಕ್ಷ ಕೋಟಿಯಷ್ಟಿದೆ. 2019-20 ರ ಎರಡನೇ ತ್ರೈಮಾಸಿಕದಲ್ಲಿ ಇದು 35.84 ಲಕ್ಷ ಕೋಟಿಯಷ್ಟಿತ್ತು. ಕಳೆದ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಶೇ.4.4 ರಷ್ಟು ಬೆಳವಣಿಗೆಯಲ್ಲಿದ್ದದ್ದು ಈ ಬಾರಿ ಶೇ.7.5 ರಷ್ಟು ಕುಸಿತ ಕಂಡಿದೆ ಎಂದು ಹೇಳಿದೆ.  

32.78 ಲಕ್ಷ ಕೋಟಿಯಷ್ಟಿದ್ದ 2019-20 ರ ಎರಡನೇ ತ್ರೈಮಾಸಿಕದ ಒಟ್ಟು ಮೌಲ್ಯವರ್ಧನೆ(ಜಿವಿಎ)  2020-21 ರಲ್ಲಿ 30.49 ಲಕ್ಷ ಕೋಟಿಗೆ ಕುಸಿದಿದ್ದು ಶೇ.7.0 ರಷ್ಟು ಇಳಿಕೆಯಾಗಿದೆ 

ಸ್ಥಿರ ಬೆಲೆ ಲೆಕ್ಕದಲ್ಲಿ 2020-21 ರ ಎರಡನೇ ತ್ರೈಮಾಸಿಕದ ಜಿಡಿಪಿ 47.22 ಲಕ್ಷ ಕೋಟಿಯಷ್ಟಿದ್ದು, 2019-20 ರಲ್ಲಿ 49.21 ಲಕ್ಷ ಕೋಟಿಯಷ್ಟಿತ್ತು. ಈ ಲೆಕ್ಕದಲ್ಲಿ ಕಳೆದ ಬಾರಿ ಬೆಳವಣಿಗೆ ಶೇ.5.9 ರಷ್ಟಿದ್ದದ್ದು ಈ ಬಾರಿ ಶೇ.4.0 ರಷ್ಟಕ್ಕೆ ಕುಸಿದಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿತ್ತು. ಆದರೆ ಲಾಕ್ ಡೌನ್ ತೆರವುಗೊಳಿಸಿದ ನಂತರದ ಪರಿಸ್ಥಿತಿಗಳೂ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.