ಸ್ಟೇಟ್ ಬ್ಯಾಂಕ್ ಇಂಡಿಯಾ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ನೇಮಕ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಅಧ್ಯಕ್ಷರನ್ನಾಗಿ ಹಿರಿಯ ಬ್ಯಾಂಕರ್ ದಿನೇಶ್ ಕುಮಾರ್ ಖರಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಅಧ್ಯಕ್ಷರನ್ನಾಗಿ ಹಿರಿಯ ಬ್ಯಾಂಕರ್ ದಿನೇಶ್ ಕುಮಾರ್ ಖರಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಜನೀಶ್ ಕುಮಾರ್ ತಮ್ಮ ಮೂರು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಯಿತು. ಕೇಂದ್ರ ಸರ್ಕಾರವು ಮೂರು ವರ್ಷಗಳ ಅವಧಿಗೆ ದಿನೇಶ್ ಕುಮಾರ್ ಅವರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ನೇಮಿಸಿದೆ.
ಈ ಅವಧಿಯು 2020ರ ಅಕ್ಟೋಬರ್ 7 ರಿಂದ ಅಥವಾ ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಮುಂದಿನ ಆದೇಶದವರೆಗೆ ಇರುತ್ತದೆ. ಹಣಕಾಸು ಸಚಿವಾಲಯವು ಈ ಅಧಿಸೂಚನೆಯನ್ನು ಹೊರಡಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ದಿನೇಶ್ ಕುಮಾರ್ ಅವರನ್ನು ನೇಮಿಸುವಂತೆ ಬ್ಯಾಂಕ್ಸ್ ಬೋರ್ಡ್ ಬ್ಯೂರೋ (ಬಿಬಿಬಿ) ಕಳೆದ ತಿಂಗಳು ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ದಿನೇಶ್ ಕುಮಾರ್ ಅವರು 2017ರಲ್ಲಿ ಎಸ್ಬಿಐ ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


