ಈರುಳ್ಳಿ ದಾಸ್ತಾನು ಸಂಗ್ರಹ ಮಿತಿ ಡಿ.31 ವರೆಗೆ ವಿಸ್ತರಣೆ
ಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಸಂಗ್ರಹ ಮಿತಿಯನ್ನು ಡಿ.31 ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಸಂಗ್ರಹ ಮಿತಿಯನ್ನು ಡಿ.31 ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಅನುಕ್ರಮವಾಗಿ 2 ಹಾಗೂ 25 ಟನ್ ಗಳ ವರೆಗೆ ಈರುಳ್ಳಿಯನ್ನು ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ. ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈರುಳ್ಳಿ ಬೆಳೆ ನಾಶದಿಂದ ಕಳೆದ ಕೆಲವು ವಾರಗಳಿಂದ ಈರುಳ್ಳಿ ಬೆಲೆ ಕೆ.ಜಿಗೆ 75 ರೂಪಾಯಿಯಷ್ಟಾಗಿತ್ತು. ಸರ್ಕಾರದ ಪ್ರಕಾರ 15 ಲಕ್ಷ ಟನ್ ಗಳಷ್ಟು ಈರುಳ್ಳಿ ರಫ್ತು ಮಾಡಿರುವುದರಿಂದ ಈರುಳ್ಳಿ ಲಭ್ಯತೆಗೆ ಕೊರತೆ ಉಂಟಾಗಿದೆ.
ಸೆಪ್ಟೆಂಬರ್ ತಿಂಗಳಿನಿಂದ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆ ಕೊರತೆ ಉಂಟಾಗಿದ್ದು, ಕೃತಕ ಬೆಲೆ ಏರಿಕೆ ಮಾಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


