ವಾಣಿಜ್ಯ

ಆನ್ ಲೈನ್ ಮೂಲಕ ಜೀವನ ಪ್ರಮಾಣ ಪತ್ರ ಸಂಗ್ರಹಿಸಲು ಇಪಿಎಫ್‌ಒ ನಿರ್ಧಾರ

ಈಗಿರುವ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ನೌಕರರ ಪಿಂಚಣಿ ಯೋಜನೆ 1995ರ ಅಡಿಯಲ್ಲಿ ಬರುವ ಪಿಂಚಣಿದಾರರ ಜೀವನ ಪ್ರಮಾಣ ಪತ್ರವನ್ನು 2021ನೇ ವರ್ಷಕ್ಕೆ ಆನ್ ಲೈನ್ ಮೂಲಕ ಪಡೆದುಕೊಳ್ಳಲು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ನಿರ್ಧರಿಸಿದೆ.

ಆನ್ ಲೈನ್ ಮೂಲಕ ಜೀವನ ಪ್ರಮಾಣ ಪತ್ರ ಸಂಗ್ರಹಿಸಲು ಇಪಿಎಫ್‌ಒ ನಿರ್ಧಾರ
ಇಪಿಎಫ್ಒ
Published On :

ಈಗಿರುವ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ನೌಕರರ ಪಿಂಚಣಿ ಯೋಜನೆ 1995ರ  ಅಡಿಯಲ್ಲಿ ಬರುವ ಪಿಂಚಣಿದಾರರ ಜೀವನ ಪ್ರಮಾಣ ಪತ್ರವನ್ನು 2021ನೇ ವರ್ಷಕ್ಕೆ ಆನ್ ಲೈನ್ ಮೂಲಕ ಪಡೆದುಕೊಳ್ಳಲು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ನಿರ್ಧರಿಸಿದೆ. 

ಅದರಂತೆ, ಪ್ರಯಾಣದಿಂದ ಮತ್ತು ಜನಸಂದಣಿಯಿಂದ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ, ಎಲ್ಲ ಪಿಂಚಣಿದಾರರು ತಮ್ಮ ಪಿಂಚಣಿ ಪಡೆಯುವ ಬ್ಯಾಂಕ್ ಶಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರವನ್ನು ಭೇಟಿ ಮಾಡಿ ತಮ್ಮ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬಹುದು. 

ಪಿಂಚಣಿದಾರರ ಮೊಬೈಲ್ ನಲ್ಲಿ ಉಮಂಗ್ ಆ್ಯಪ್ ಇದ್ದು ಅದಕ್ಕೆ ಬಯೋಮೆಟ್ರಿಕ್ ಸಾಧನವನ್ನು ಅಳವಡಿಸಿಕೊಂಡಿದ್ದರೆ ಇದರ ಮೂಲಕವೂ ಜೀವನ ಪ್ರಮಾಣ ಪತ್ರವನ್ನುಸಲ್ಲಿಸಬಹುದು. 

ಪಿಂಚಣಿದಾರರ ಗಮನಕ್ಕೆ ತರುವುದೇನೆಂದರೆ ಈ ಬಾರಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಿದ ತಿಂಗಳಿಂದ 12 ತಿಂಗಳವರೆಗೆ ಮಾನ್ಯವಾಗಿರುತ್ತದೆ ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.