ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್
ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.
ಆಟೋ ಸ್ಕ್ರ್ಯಾಪೇಜ್ ನೀತಿ ಸಿದ್ಧವಾಗಿದೆ ಮತ್ತು ಈ ಸಂಬಂಧ ಎಲ್ಲಾ ಪಾಲುದಾರರು ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಜಾವಡೇಕರ್ ಅವರು ತಿಳಿಸಿದ್ದಾರೆ.
ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತದ ಸಾಧ್ಯತೆಗಳ ಬಗ್ಗೆ ವಿವರಿಸಿದ ಅವರು, ದರ ಕಡಿತ ಪ್ರಸ್ತಾವನೆಯನ್ನು ಹಣಕಾಸು ಸಚಿವಾಲಯವು ರೂಪಿಸುತ್ತಿದೆ ಮತ್ತು ನಾನು ಈಗಲೇ ಎಲ್ಲಾ ವಿವರ ನೀಡಲು ಸಾಧ್ಯವಿಲ್ಲ ಎಂದರು.
ಆದಾಗ್ಯೂ, ಜಾವಡೇಕರ್, "ಸ್ವಾಭಾವಿಕವಾಗಿ ತಾರ್ಕಿಕ ಅನುಕ್ರಮದಲ್ಲಿ, 2-ವೀಲರ್, 3-ವೀಲರ್, ಸಾರ್ವಜನಿಕ ಸಾರಿಗೆ ವಾಹನಗಳು, ಆ ವಿಭಾಗದಲ್ಲಿ ಮಾತ್ರ ಮತ್ತು ನಂತರ 4-ವೀಲರ್ಗಳ ಮೇಲಿನ ದರ ಕಡಿತ ಮಾಡಬಹದು. ಶೀಘ್ರದಲ್ಲೇ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಜಾವಡೇಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


