ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ!
ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ ಬಂದಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ನವದೆಹಲಿ: ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ ಬಂದಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
2016 ರ ಏಪ್ರಿಲ್ ನಿಂದ ಮಾರ್ಚ್ 2020 ರ ಅವಧಿಯಲ್ಲಿ 46 ಕ್ಷೇತ್ರಗಳಲ್ಲಿನ ವಿವಿಧ ಕಂಪನಿಗಳಿಗೆ, ಪ್ರಮುಖವಾಗಿ ಸ್ಟಾರ್ಟ್ ಅಪ್ ಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟು ಮೊತ್ತ ಚೀನಾದ ವಿದೇಶಿ ನೇರ ಬಂಡವಾಳ ಹೂಡಿಕೆಯ ರೂಪದಲ್ಲಿ ಬಂದಿದೆ ಎಂದು ರಾಜ್ಯಸಭೆಯಲ್ಲಿ ಸರ್ಕಾರ ಲಿಖಿತ ಉತ್ತರ ನೀಡಿದೆ.
ಆಟೋಮೊಬೈಲ್ ಕ್ಷೇತ್ರ, ಪುಸ್ತಕ ಮುದ್ರಣ, ಎಲೆಕ್ಟ್ರಾನಿಕ್ಸ್, ಸೇವೆಗಳು ಹಾಗೂ ಎಲೆಕ್ಟ್ರಿಕಲ್ ಉಪಕರಣ ಕ್ಷೇತ್ರಗಳಲ್ಲಿ 100 ಮಿಲಿಯನ್ ಡಾಲರ್ ಗೂ ಅಧಿಕ ಎಫ್ ಡಿಐ ಹರಿದುಬಂದಿದೆ.
ಈ ಪೈಕಿ ಅತಿ ಹೆಚ್ಚು ಅಂದರೆ 172 ಮಿಲಿಯನ್ ಡಾಲರ್ ಆಟೋಮೊಬೈಲ್ ಕ್ಷೇತ್ರಕ್ಕೆ ಬಂದಿದೆ ಎನ್ನುತ್ತಿದೆ ಸರ್ಕಾರಿ ಅಂಕಿ-ಅಂಶ. ಕಾರ್ಪೊರೇಟ್ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ರಾಜ್ಯಸಭೆಗೆ ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


