2022 ರಲ್ಲಿ ಭಾರತದ ಜಿಡಿಪಿ ಮುನ್ನೋಟವನ್ನು ಶೇ.8.4 ಕ್ಕೆ ಇಳಿಸಿದ ಫಿಚ್!
2022 ನೇ ಸಾಲಿನಲ್ಲಿ ಭಾರತದ ಜಿಡಿಪಿಯ ಮುನ್ನೋಟವನ್ನು ಫಿಚ್ ರೇಟಿಂಗ್ಸ್ ಸಂಸ್ಥೆ ಶೇ.8.4 ಕ್ಕೆ ಇಳಿಕೆ ಮಾಡಿದೆ.

ನವದೆಹಲಿ: 2022 ನೇ ಸಾಲಿನಲ್ಲಿ ಭಾರತದ ಜಿಡಿಪಿಯ ಮುನ್ನೋಟವನ್ನು ಫಿಚ್ ರೇಟಿಂಗ್ಸ್ ಸಂಸ್ಥೆ ಶೇ.8.4 ಕ್ಕೆ ಇಳಿಕೆ ಮಾಡಿದೆ.
ಆದರೆ ಮುಂದಿನ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಪ್ರಕ್ಷೇಪಣವನ್ನು ಶೇ.10.3ಕ್ಕೆ ಅಂದಾಜಿಸಿದೆ.
ಅಕ್ಟೋಬರ್ ತಿಂಗಳಲ್ಲಿ ಫಿಚ್ ಸಂಸ್ಥೆ ಜಿಡಿಪಿ ಬೆಳವಣಿಗೆಯನ್ನು 2021-22 ನೇ ಸಾಲಿನಲ್ಲಿ (ಏಪ್ರಿಲ್ 2021 ರಿಂದ ಮಾರ್ಚ್ 2022) ವರೆಗೆ ಶೇ.8.7 ಹಾಗೂ 2023 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಶೇ.10 ರ ಬೆಳವಣಿಗೆಯನ್ನು ಅಂದಾಜಿಸಿತ್ತು.
" ಮಾರ್ಚ್ 2022 ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ಮುನ್ನೋಟವನ್ನು ಶೇ.8.4 ಕ್ಕೆ ಇಳಿಕೆ ಮಾಡಲಾಗಿದೆ. 2023 ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಮುನ್ನೋಟ ಶೇ.10.3 ಕ್ಕೆ ಏರಿಕೆಯಾಗಬೇಕಿದೆ" ಎಂದು ಜಾಗತಿಕ ಆರ್ಥಿಕ ಮುನ್ನೋಟದಲ್ಲಿ ಫಿಚ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


