ಭಾರತದಲ್ಲಿ 3 ವರ್ಷಗಳಲ್ಲಿ ಡಿಮ್ಯಾಟ್ ಖಾತೆದಾರರ ಸಂಖ್ಯೆ ದ್ವಿಗುಣ; 7.38 ಕೋಟಿಗೆ ಏರಿಕೆ
ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಡಿಮ್ಯಾಟ್ ಖಾತೆ ತೆರೆಯುವವರ ಸಂಖ್ಯೆ ದುಪ್ಪಟ್ಟಾಗಿದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ಸರಾಸರಿ 12 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ.

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಡಿಮ್ಯಾಟ್ ಖಾತೆ ತೆರೆಯುವವರ ಸಂಖ್ಯೆ ದುಪ್ಪಟ್ಟಾಗಿದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ಸರಾಸರಿ 12 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ.
ಡಿಮ್ಯಾಟ್ ಖಾತೆದಾರರ ಸಂಖ್ಯೆ ಈ ಮೂಲಕ 7.38 ಕೋಟಿಗೆ ಏರಿಕೆಯಾಗಿದ್ದು, ಇವುಗಳನ್ನು ಹೊರತುಪಡಿಸಿ, ಮ್ಯೂಚುವಲ್ ಫಂಡ್‌ಗಳ ಹೂಡಿಕೆದಾರರ ಸಂಖ್ಯೆ ಸುಮಾರು 2.75 ಕೋಟಿ ಮತ್ತು ಸೆಬಿಯೊಂದಿಗೆ ನೋಂದಾಯಿತ ಹೂಡಿಕೆ ಸಲಹೆಗಾರರ (RIA) ಸಂಖ್ಯೆ 1,324 ಆಗಿದೆ. ಮೂರು ವರ್ಷಗಳಲ್ಲಿ 3.79 ಕೋಟಿ ಹೊಸ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ
ಇತ್ತೀಚಿನ ದಿನಗಳಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಹೂಡಿಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. 2018-19ನೇ ಹಣಕಾಸು ವರ್ಷದಲ್ಲಿ ಡಿಮ್ಯಾಟ್ ಖಾತೆದಾರರ ಸಂಖ್ಯೆ 3.59 ಕೋಟಿ ಇದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಅಕ್ಟೋಬರ್ ಅಂತ್ಯದ ವೇಳೆಗೆ 7.38 ಕೋಟಿಗೆ ಏರಿಕೆಯಾಗಿದೆ. ಕಳೆದ 31 ತಿಂಗಳಲ್ಲಿ 3.79 ಕೋಟಿ ಹೊಸ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ. ಈ ರೀತಿಯಾಗಿ, ಪ್ರತಿ ತಿಂಗಳು ಸರಾಸರಿ 12 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1.87 ಕೋಟಿ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ
ಪ್ರಸಕ್ತ ಹಣಕಾಸು ವರ್ಷದ ಕುರಿತು ಮಾತನಾಡುವುದಾದರೆ, ಡಿಮ್ಯಾಟ್ ಖಾತೆ ತೆರೆಯುವ ವೇಗ ಹೆಚ್ಚಿದೆ. ಕಳೆದ ಹಣಕಾಸು ವರ್ಷದ ಅಂತ್ಯಕ್ಕೆ ಒಟ್ಟು ಡಿಮ್ಯಾಟ್ ಖಾತೆಗಳ ಸಂಖ್ಯೆ 5.51 ಕೋಟಿ. ಈ ಮೂಲಕ ಪ್ರಸಕ್ತ ಹಣಕಾಸು ವರ್ಷದ ಮೊದಲ ಏಳು ತಿಂಗಳ ಅವಧಿಯಲ್ಲಿ ದಾಖಲೆಯ 1.87 ಕೋಟಿ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ. ಇದು ಪ್ರತಿ ತಿಂಗಳು ಸರಾಸರಿ 26.71 ಲಕ್ಷ ಹೊಸ ಖಾತೆಗಳನ್ನು ತೆರೆಯಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1.87 ಕೋಟಿ ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ ಎಂದು ಲೋಕಸಭೆಗೆ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


