ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನ: ಇದುವರೆಗೂ 4.51 ಕೋಟಿಗೂ ಅಧಿಕ ಅರ್ಜಿ ನೋಂದಣಿ
2019-20 ಆರ್ಥಿಕ ವರ್ಷದಲ್ಲಿ 5.95 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಾಗಿತ್ತು.

ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇದೇ ಡಿಸೆಂಬರ್ 31 ಕೊನೆಯ ದಿನವಾಗಿದೆ. ಇದೇ ಡಿಸೆಂಬರ್ 26ರವರೆಗಿನ ಮಾಹಿತಿಯ ಪ್ರಕಾರ 2020-21ನೇ ಸಾಲಿಗಾಗಿ 4.51 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ನೋಂದಣಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇದರಲ್ಲಿ ಸುಮಾರು 2.44 ಕೋಟಿ ಐಟಿಆರ್-1 ಮತ್ತು 1.12 ಕೋಟಿ ಐಟಿಆರ್-೪ ಕೂಡಾ ಸೇರಿದೆ.
ಐಟಿಆರ್ ಫಾರ್ಮ್ 1 ಹಾಗೂ ಐಟಿಆರ್ ಫಾರ್ಮ್ 4 ಸರಳ ಫಾರ್ಮ್ ಗಳಾಗಿದ್ದು, ಸಣ್ಣ ಮತ್ತು ಮಧ್ಯಮ ವರ್ಗದ ದೊಡ್ಡ ಪ್ರಮಾಣದ ತೆರಿಗೆದಾರರಿದ್ದಾರೆ. ಐಟಿಆರ್ ಫಾರ್ಮ್ 1ನ್ನು 50 ಲಕ್ಷದವರೆಗೂ ಆದಾಯವಿರುವವರು ನೋಂದಣಿ ಮಾಡಬಹುದಾಗಿದೆ. ವೇತನದಾರರು, ಆಸ್ತಿದಾರರು ಮತ್ತಿತರ ಆದಾಯ ಮೂಲಗಳ ತೆರಿಗೆದಾರರು ಇದನ್ನು ನೋಂದಣಿ ಮಾಡುತ್ತಾರೆ.
50 ಲಕ್ಷ ರೂಪಾಯಿ ಆದಾಯವಿರುವ ಸಂಸ್ಥೆಗಳು, ವ್ಯವಹಾರ ಮತ್ತು ವೃತ್ತಿಯಿಂದ ಆದಾಯ ಪಡೆಯುವವರು ಐಟಿಆರ್- 4 ಫಾರ್ಮ್ ನ್ನು ನೋಂದಣಿ ಮಾಡಬಹುದಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31ರವರೆಗೂ ಗಡುವು ವಿಸ್ತರಿಸಲಾಗಿದೆ. 2019-20 ಆರ್ಥಿಕ ವರ್ಷದಲ್ಲಿ 5.95 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


