ಸ್ಟಾಕ್ ಎಕ್ಸ್ ಚೇಂಜ್ ಗೆ ಮುಂದಿನ ವರ್ಷ ಭಾರತೀಯ ಜೀವ ವಿಮಾ ನಿಗಮ ಪ್ರವೇಶ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಸ್ಟಾಕ್ ಎಕ್ಸೇಂಜ್ ವಹಿವಾಟಿನಲ್ಲಿ ಪಟ್ಟಿಯಲ್ಲಿ ಭಾರತೀಯ ಜೀವ ವಿಮಾ ನಿಗಮವನ್ನು ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ.

ನವದೆಹಲಿ: ಸ್ಟಾಕ್ ಎಕ್ಸೇಂಜ್ ವಹಿವಾಟಿನಲ್ಲಿ ಪಟ್ಟಿಯಲ್ಲಿ ಭಾರತೀಯ ಜೀವ ವಿಮಾ ನಿಗಮವನ್ನು ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ಜೀವ ವಿಮಾದಾರರ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಮಾಡುವ ಮೂಲಕ 1.75 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆ. ಮಾರ್ಚ್ 2022 ರಲ್ಲಿ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದೊಳಗೆ ಎಲ್‌ಐಸಿ ಐಪಿಒ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ ಎಲ್ ಐಸಿಯಲ್ಲಿ ಶೇಕಡಾ 100ರಷ್ಟು ಷೇರುಗಳನ್ನು ಹೊಂದಿದ್ದು ಅದರ ಒಂದು ಭಾಗವನ್ನು ಪ್ರಕ್ರಿಯೆಗೆ ಮಾರಾಟ ಮಾಡಲು ಯೋಜಿಸಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್‌ಐಸಿ ಐಪಿಒಗೆ ದಾರಿ ಮಾಡಿಕೊಡಲು ಜೀವ ವಿಮಾ ಕಾಯ್ದೆಯಲ್ಲಿ ಅಗತ್ಯ ತಿದ್ದುಪಡಿಗಳನ್ನು ತಂದಿದ್ದರು.
ಡೆಲಾಯ್ಟ್ ಮತ್ತು ಎಸ್‌ಬಿಐ ಕ್ಯಾಪಿಟಲ್ ಅನ್ನು ಐಪಿಒ ಪೂರ್ವ ಸಲಹೆಗಾರರಾಗಿ ನೇಮಿಸಲಾಗಿದೆ. ಮೂಲಗಳ ಪ್ರಕಾರ, ಎಲ್ ಐಸಿಯ ಸಂಪೂರ್ಣ ಚಟುವಟಿಕೆಯ ಪಟ್ಟಿಯನ್ನು ಸಿದ್ದಮಾಡಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


