ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್
ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

ನವದೆಹಲಿ: ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,
Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ
ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.
ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


