ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆ!
ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆಯಾಗಿದೆ. ಆರ್ ಬಿಐ ನ ಕಂಫರ್ಟ್ ಮಟ್ಟವನ್ನು ಮೀರಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

ನವದೆಹಲಿ: ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆಯಾಗಿದೆ. ಆರ್ ಬಿಐ ನ ಕಂಫರ್ಟ್ ಮಟ್ಟವನ್ನು ಮೀರಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.
ರಾಷ್ಟ್ರೀಯ ಅಂಕಿಅಂಶಗಳ ಕಛೇರಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ ಏಪ್ರಿಲ್ ನಲ್ಲಿ ಶೇ.4.23 ರಷ್ಟು ಏರಿಕೆಯಾಗಿದ್ದು, ಆಹಾರ ಪದಾರ್ಥಗಳ ಹಣದುಬ್ಬರ ಶೇ.5.01 ರಷ್ಟು ಏರಿಕೆಯಾಗಿದ್ದು ಏಪ್ರಿಲ್ ತಿಂಗಳಿಗಿಂತ ಶೇ.1.96 ರಷ್ಟು ಏರಿಕೆಯಾಗಿದೆ.
ಚಿಲ್ಲರೆ ಹಣದುಬ್ಬರ ದರವನ್ನು ಶೇ.4 ರಷ್ಟರಲ್ಲಿ ಇರಿಸುವುದಕ್ಕೆ ಸರ್ಕಾರ ಆರ್ ಬಿಐಗೆ ಸೂಚನೆ ನೀಡಿದೆ.
2021-22 ಅವಧಿಯಲ್ಲಿ ಕೇಂದ್ರ ಬ್ಯಾಂಕ್ ಸಿಪಿಐ ಹಣದುಬ್ಬರ ಶೇ.5.1 ರಷ್ಟಿರಲಿದೆ ಎಂದು ಅಂದಾಜಿಸಿತ್ತು, ಮೊದಲ ತ್ರೈಮಾಸಿಕದಲ್ಲಿ ಶೇ.5.2 ರಷ್ಟು, ಎರಡನೇ ತ್ರೈಮಾಸಿಕದಲ್ಲಿ ಶೇ.5.4 ರಷ್ಟು, ಮೂರನೇ ತ್ರೈಮಾಸಿಕದಲ್ಲಿ ಶೇ.4.7 ರಷ್ಟು, ನಾಲ್ಕನೇ ತ್ರೈಮಾಸಿಕದಲ್ಲಿ ಶೇ.5.3 ರಷ್ಟಿರಲಿದೆ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


