ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೂ.100 ಗಡಿ ದಾಟಿದ ಪೆಟ್ರೋಲ್ ದರ; ಇಲ್ಲಿದೆ ಹೊಸ ದರ ಪಟ್ಟಿ!
ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪೆಟ್ರೋಲ್ ದರ ರೂ.100ರ ಗಡಿ ದಾಟಿದೆ.

ಬೆಂಗಳೂರು: ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪೆಟ್ರೋಲ್ ದರ ರೂ.100ರ ಗಡಿ ದಾಟಿದೆ
ಗುರುವಾರ ಸರ್ಕಾರಿ ಬಂಕ್ ಗಳಲ್ಲಿ ಲೀಟರ್ ಪೆಟ್ರೋಲ್ ರೂ.99.95 ಹಾಗೂ ಡೀಸೆಲ್ ರೂ.92.72 ಇತ್ತು. ಬಳಿಕ ರಾತ್ರಿ ದರ ಪರಿಷ್ಕೃತಗೊಂಡಿದ್ದು, ಶುಕ್ರವಾರಕ್ಕೆ ಅನ್ವಯಿಸುವಂತೆ ರೂ.100.23 ತಲುಪಿದೆ. ಈಗಾಗಲೇ ಖಾಸಗಿ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ದರ ಶತಕದ ಹೊಸ್ತಿಲು ದಾಟಿದೆ.
ಈಗಾಗಲೇ ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ದರವು ರೂ. 100ಕ್ಕಿಂತ ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬೆಲೆ ಹೆಚ್ಚಿಸಿದ್ದು, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ಶತಕ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ದೇಶದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ರಿಂದ 27 ಪೈಸೆ ಮತ್ತು ಡೀಸೆಲ್ ದರ 28 ರಿಂದ 30 ಪೈಸೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಇದರಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.99ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 87.75 ರೂ ಗೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.14ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.2ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.89ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 90.59 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.2ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.36 ರೂ ಗೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


