ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ!

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ!
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು(ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 100 ರೂಪಾಯಿ ದಾಟಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.47 ರೂಪಾಯಿಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.26ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.22ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ  87.97ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.36ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.44ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.12ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 90.82 ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.40ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.58 ರೂ ಗೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.