"ತೈಲ ಬೆಲೆ ಏರಿಕೆಯಾಗಲು ಕಾಂಗ್ರೆಸ್ ಕಾರಣ"
ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆಗಳಿಗೆ ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ.

ನವದೆಹಲಿ: ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆಗಳಿಗೆ ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಈ ಸರ್ಕಾರದ ಮೇಲೆ ಲಕ್ಷಾಂತರ ಕೋಟಿಗಳಷ್ಟು ಸಾಲದ ಹೊರೆಯನ್ನು ಬಿಟ್ಟು ಹೋಗಿತ್ತು. ಇದನ್ನು ಬಡ್ಡಿ ಸಮೇತ ವಾಪಸ್ ನೀಡುವ ಜವಾಬ್ದಾರಿ ಈ ಸರ್ಕಾರದ ಮೇಲಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ತೈಲ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪೆಟ್ರೋಲ್ ಪಂಪ್ ಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯ ವಿಷಯವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಅರ್ಥಶಾಸ್ತ್ರಜ್ಞರು ಇತ್ತೀಚೆಗಷ್ಟೆ ಒಂದು ಅಂಶವನ್ನು ಮುನ್ನೆಲೆಗೆ ತಂದಿದ್ದರು. 2014ಕ್ಕಿಂತಲೂ ಮುನ್ನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿಗಳಷ್ಟು ಸಾಲವನ್ನು ತೈಲ ಬಾಂಡ್ ಗಳ ಮೇಲೆ ಹೊಂದಿತ್ತು. ಈ ಕಾರಣಾದಿಂದಾಗಿ ಈಗಿನ ಸರ್ಕಾರ ಅದನ್ನು ಅಸಲು ಹಾಗೂ ಬಡ್ಡಿಯ ಸಮೇತ ಸಾಲ ಮರುಪಾವತಿ ಮಾಡಬೇಕಿದೆ, ತೈಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಇದೇ ಕಾರಣ" ಎಂದು ಸಚಿವರು ವಿವರಿಸಿದ್ದಾರೆ.
"ಇದರ ಜೊತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯೂ ದೇಶೀಯವಾಗಿ ತೈಲೋತ್ಪನ್ನಗಳ ಮೇಲಿನ ಬೆಲೆ ಏರಿಕೆಗೆ ಕಾರಣವಾಗಿದೆ. ದೇಶೀಯವಾಗಿ ಇರುವ ಬೇಡಿಕೆಗಳನ್ನು ಸರಿದೂಗಿಸಲು ಶೇ.80 ರಷ್ಟು ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ತೈಲದಿಂದ ಬರುತ್ತಿರುವ ತೆರಿಗೆಯನ್ನು ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಚಟುವಟಿಕೆಯಂತಹ ಅಭಿವೃದ್ಧಿ ಯೋಜನೆಗಳಿಗೆ ಬಳಸಿದೆ, ಇದರಲ್ಲಿ ಮುಚ್ಚಿಡುವಂಥಹದ್ದೇನು ಇಲ್ಲ ಎಂದು ಪ್ರಧಾನ್ ತಿಳಿಸಿದ್ದಾರೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ 100 ರೂಪಾಯಿಗಳಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


