ವಾಣಿಜ್ಯ

ಭಾರತಕ್ಕೆ ಗಡೀಪಾರು ಆದೇಶ ವಿರುದ್ಧ ವಜ್ರೋದ್ಯಮಿ ನೀರವ್ ಮೋದಿ ಲಂಡನ್ ಹೈಕೋರ್ಟ್ ಗೆ ಮೇಲ್ಮನವಿ!

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಬಹುಕೋಟಿ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರೋದ್ಯಮಿ ನೀರವ್ ಮೋದಿಯ ಗಡೀಪಾರಿಗೆ ಲಂಡನ್ ನ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಅಲ್ಲಿನ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಭಾರತಕ್ಕೆ ಗಡೀಪಾರು ಆದೇಶ ವಿರುದ್ಧ ವಜ್ರೋದ್ಯಮಿ ನೀರವ್ ಮೋದಿ ಲಂಡನ್ ಹೈಕೋರ್ಟ್ ಗೆ ಮೇಲ್ಮನವಿ!
ನೀರವ್ ಮೋದಿ
Published On :

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಬಹುಕೋಟಿ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರೋದ್ಯಮಿ ನೀರವ್ ಮೋದಿಯ ಗಡೀಪಾರಿಗೆ ಲಂಡನ್ ನ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಅಲ್ಲಿನ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ದೋಷಿ ಎಂದು ಇಂಗ್ಲೆಂಡಿನ ಕೆಳ ನ್ಯಾಯಾಲಯ ತೀರ್ಪು ನೀಡಿ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಆದೇಶ ಹೊರಡಿಸಿತ್ತು.

ಕಳೆದ ಏಪ್ರಿಲ್ 16ರಂದು ಇಂಗ್ಲೆಂಡ್ ಸರ್ಕಾರದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ನೀರವ್ ಮೋದಿಯ ಗಡೀಪಾರಿಗೆ ಸಹಿ ಹಾಕಿದ್ದರು.

ಭಾರತದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರದ 570 ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡಿಗೆ ಪರಾರಿಯಾದ ಆರೋಪದಲ್ಲಿ ನೀರವ್ ಮೋದಿ ಪ್ರಮುಖ ದೋಷಿ ಎಂದು ಇಂಗ್ಲೆಂಡಿನ ಕೆಳ ನ್ಯಾಯಾಲಯ ತೀರ್ಪು ನೀಡಿದೆ.

2019ರ ಮಾರ್ಚ್ 19ರಂದು ನೀರವ್ ಮೋದಿಯ ಬಂಧನವಾದ ನಂತರ ಹಲವು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ ತಿರಸ್ಕೃತವಾಗುತ್ತಾ ಬಂದಿದ್ದು ಲಂಡನ್ ನ ವಂಡ್ಸ್ ವರ್ತ್ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.