ವಾಣಿಜ್ಯ

2ನೇ ತ್ರೈಮಾಸಿಕ ಜಿಡಿಪಿ: ಭಾರತದ ಆರ್ಥಿಕತೆ ಜುಲೈ-ಸೆಪ್ಟೆಂಬರ್‌ನಲ್ಲಿ ಶೇ.8.4 ರಷ್ಟು ಬೆಳವಣಿಗೆ

ಭಾರತದ ಜಿಡಿಪಿಯು 2021-22ರ ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆ ಸಾಧಿಸಿದ್ದು, ದೇಶದ ಆರ್ಥಿಕತೆಯು ಕೋವಿಡ್ ಪೂರ್ವದ ಮಟ್ಟವನ್ನು ಮೀರಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳು ಮಂಗಳವಾರ ತಿಳಿಸಿವೆ.

2ನೇ ತ್ರೈಮಾಸಿಕ ಜಿಡಿಪಿ: ಭಾರತದ ಆರ್ಥಿಕತೆ ಜುಲೈ-ಸೆಪ್ಟೆಂಬರ್‌ನಲ್ಲಿ ಶೇ.8.4 ರಷ್ಟು ಬೆಳವಣಿಗೆ
ಜಿಡಿಪಿ ಬೆಳವಣಿಗೆ(ಸಾಂಕೇತಿಕ ಚಿತ್ರ)
Published On :

ನವದೆಹಲಿ: ಭಾರತದ ಜಿಡಿಪಿಯು 2021-22ರ ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು  ಬೆಳವಣಿಗೆ ಸಾಧಿಸಿದ್ದು,  ದೇಶದ ಆರ್ಥಿಕತೆಯು ಕೋವಿಡ್ ಪೂರ್ವದ ಮಟ್ಟವನ್ನು ಮೀರಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳು ಮಂಗಳವಾರ ತಿಳಿಸಿವೆ.

ರಾಷ್ಟ್ರೀಯ ಅಂಕಿ-ಅಂಶ ಕಚೇರಿ(NSO) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಚ್ಚಾತೈಲದ ಉತ್ಪಾದನೆಯಲ್ಲಿ ಶೇಕಡಾ 2.2 ರಷ್ಟು ಬೆಳವಣಿಗೆ ಕುಸಿತವಾಗಿದೆ. ಆದರೆ ಎಂಟು ಮೂಲಸೌಕರ್ಯ ವಲಯಗಳಲ್ಲಿ ಒಟ್ಟಾರೆ ಶೇಕಡಾ 7.4 ರಷ್ಟು ಬೆಳವಣಿಗೆ ಆಗಿದೆ.

ಇನ್ನು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ ಉಕ್ಕಿನ ಕ್ಷೇತ್ರದಲ್ಲಿ ಶೇಕಡಾ 0.9 ರಷ್ಟು ಬೆಳವಣಿಗೆ ಆಗಿದ್ದರೆ, ಸಿಮೆಂಟ್ ವಲಯದಲ್ಲಿ ಶೇ 14.5 ರಷ್ಟು, ಕಲ್ಲಿದ್ದಲು ಶೇ. ‌14.6 ರಷ್ಟು ಏರಿಕೆ ಆಗಿದೆ.

ಅಧಿಕೃತ ಬಿಡುಗಡೆಯ ಪ್ರಕಾರ, ಎಂಟು ಪ್ರಮುಖ ಕೈಗಾರಿಕೆಗಳ ಸೂಚ್ಯಂಕವು ಅಕ್ಟೋಬರ್ 2021ರಲ್ಲಿ 136.2 ರಷ್ಟಿದೆ. ಕಲ್ಲಿದ್ದಲು, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಉತ್ಪಾದನೆಯು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಹೆಚ್ಚಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.