ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ದೆಹಲಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ, ಇಂದಿನ ದರ ಹೀಗಿದೆ 

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಭಾನುವಾರ ಕೂಡ ಏರಿಕೆಯಾಗಿದೆ, ಕಳೆದ ಆರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ದೆಹಲಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ, ಇಂದಿನ ದರ ಹೀಗಿದೆ 
ಸಾಂದರ್ಭಿಕ ಚಿತ್ರ
Published On :

ಮುಂಬೈ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಭಾನುವಾರ ಕೂಡ ಏರಿಕೆಯಾಗಿದೆ, ಕಳೆದ ಆರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.

ಇಂದು ಪೆಟ್ರೋಲ್ ದರದಲ್ಲಿ 30 ಪೈಸೆ ಮತ್ತು ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಇಂದು 104 ರೂಪಾಯಿ 14 ಪೈಸೆಯಾಗಿದ್ದು,  ಡೀಸೆಲ್ ದರ 92 ರೂಪಾಯಿ 82 ಪೈಸೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110 ರೂಪಾಯಿ  12 ಪೈಸೆಯಾಗಿದ್ದು ಡೀಸೆಲ್ ದರ 100 ರೂಪಾಯಿ 66 ಪೈಸೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107 ರೂಪಾಯಿ 77 ಪೈಸೆ ಹಾಗೂ ಲೀಟರ್ ಡೀಸೆಲ್ ದರ 98 ರೂಪಾಯಿ 52 ಪೈಸೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.