ಫೆಬ್ರವರಿಯಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.3.6 ರಷ್ಟು ಇಳಿಕೆ!
ಫೆಬ್ರವರಿಯಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.3.6 ರಷ್ಟು ಇಳಿಕೆಯಾಗಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.

ನವದೆಹಲಿ: ಫೆಬ್ರವರಿಯಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.3.6 ರಷ್ಟು ಇಳಿಕೆಯಾಗಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.
ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ದತ್ತಾಂಶದ ಪ್ರಕಾರ, ತಯಾರಿಕಾ ವಲಯದ ಉತ್ಪಾದನೆಯು ಫೆಬ್ರವರಿ 2021 ರಲ್ಲಿ ಶೇಕಡಾ 3.7 ರಷ್ಟು ಕುಸಿದಿದೆ ಎಂದು ತಿಳಿದು ಬಂದಿದೆ.
ಗಣಿಗಾರಿಕೆ ಉತ್ಪಾದನೆಯು ಶೇಕಡಾ 5.5 ರಷ್ಟು ಕುಸಿದಿದ್ದರೆ, ಫೆಬ್ರವರಿಯಲ್ಲಿ ವಿದ್ಯುತ್ ಉತ್ಪಾದನೆಯು ಶೇಕಡಾ 0.1 ರಷ್ಟು ಏರಿಕೆಯಾಗಿದೆ.
ಫೆಬ್ರವರಿ 2020 ರಲ್ಲಿ ಐಐಪಿ ಶೇಕಡಾ 5.2 ರಷ್ಟು ಏರಿಕೆಯಾಗಿದೆ. 2019-20ರ ಏಪ್ರಿಲ್-ಫೆಬ್ರವರಿ ಅವಧಿಯಲ್ಲಿನ ಐಐಪಿ ಬೆಳವಣಿಗೆಗೆ ಹೋಲಿಸಿದರೇ ಶೇಕಡಾ 11.3 ರಷ್ಟು ಸಂಕುಚಿತಗೊಂಡಿದೆ. ಕಳೆದ ವರ್ಷ ಮಾರ್ಚ್‌ನಿಂದ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೈಗಾರಿಕಾ ಉತ್ಪಾದನೆಯು ಶೇಕಡಾ 18.7 ರಷ್ಟು ಕುಸಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


