ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ
ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ನವದೆಹಲಿ: ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಇದರೊಂದಿಗೆ, 2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಪರಿಹಾರದ ಕೊರತೆಯ ಬದಲಾಗಿ 1.59 ಲಕ್ಷ ಕೋಟಿ ರೂಪಾಯಿಗಳ ಬ್ಯಾಕ್ ಟು ಬ್ಯಾಕ್ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಪಾವತಿಸಬೇಕಾದ ಜಿಎಸ್‌ಟಿ ಪರಿಹಾರದ ಕೊರತೆಯನ್ನು 2.59 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಿದೆ. ಅದರಲ್ಲಿ ಈ ವರ್ಷ ಸುಮಾರು 1.59 ಲಕ್ಷ ಕೋಟಿ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


