2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ. 8.5 ನಿಗದಿ
2020-21ನೇ ಸಾಲಿನ ಹಣಕಾಸು ವರ್ಷದಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಗೆ ಶೇಕಡಾ 8.5 ಬಡ್ಡಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ.

ನವದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಗೆ ಶೇಕಡಾ 8.5 ಬಡ್ಡಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ(EPFO) ಐದು ಕೋಟಿಗೂ ಹೆಚ್ಚು ಮಂದಿಗೆ ಇದು ದೀಪಾವಳಿಯ ಉಡುಗೊರೆಯಾಗಿದೆ.
ಭವಿಷ್ಯ ನಿಧಿ ಸಂಘಟನೆಯ(ಇಪಿಎಫ್‌ಒ) ಉನ್ನತ ನಿರ್ಧಾರ ಕೈಗೊಳ್ಳುವ ಕೇಂದ್ರೀಯ ಟ್ರಸ್ಟಿಗಳ ಬೋರ್ಡ್ ಸಭೆಯಲ್ಲಿ 2020-21ರ ಹಣಕಾಸು ವರ್ಷದಲ್ಲಿ ಭವಿಷ್ಯ ನಿಧಿ ಠೇವಣಿ ಮೇಲೆ ಶೇ. 8.5 ರಷ್ಟು ಬಡ್ಡಿದರವನ್ನು ನಿಗದಿಪಡಿಸಲು ನಿರ್ಧರಿಸಲಾಗಿತ್ತು.
"2020-21ರ ಇಪಿಎಫ್ ಮೇಲಿನ ಶೇ. 8.5 ರ ಬಡ್ಡಿ ದರಕ್ಕೆ ಕೇಂದ್ರ ಹಣಕಾಸು ಸಚಿವಾಲಯವು ಅನುಮೋದಿಸಿದೆ ಮತ್ತು ಈಗ ಅದನ್ನು ಐದು ಕೋಟಿಗೂ ಹೆಚ್ಚು ಚಂದಾದಾರರ ಖಾತೆಗಳಿಗೆ ಜಮೆ ಮಾಡಲಾಗುವುದು" ಎಂದು ಮೂಲಗಳು ತಿಳಿಸಿವೆ.
ಕಳೆದ ಮಾರ್ಚ್(2019-20)ನಲ್ಲಿ ಇಪಿಎಫ್‌ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಏಳು ವರ್ಷಗಳಲ್ಲೇ ಕನಿಷ್ಠ ಶೇ. 8.5ಕ್ಕೆ ಇಳಿಸಲಾಗಿತ್ತು, ಇದು 2018-19ರಲ್ಲಿ ಶೇ 8.65 ರಷ್ಟಿತ್ತು. ಆದರೆ ಈ ವರ್ಷವೂ ಶೇ.8.5 ರಷ್ಟು ಬಡ್ಡಿ ದರ ನಿಗದಿಪಡಿಸುವ ಮೂಲಕ ವೇತನ ವರ್ಗಕ್ಕೆ ರಿಲೀಫ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


