ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ಫೋರ್ಡ್
ಅಮೆರಿಕದ ಆಟೋಮೊಬೈಲ್ ಸಂಸ್ಥೆ ಫೋರ್ಡ್ ಭಾರತದಲ್ಲಿ ತನ್ನ ಎರಡು ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಿದೆ.

ನವದೆಹಲಿ: ಅಮೆರಿಕದ ಆಟೋಮೊಬೈಲ್ ಸಂಸ್ಥೆ ಫೋರ್ಡ್ ಭಾರತದಲ್ಲಿ ತನ್ನ ಎರಡು ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಿದೆ. ಮುಂದಿನ ದಿನಗಳಲ್ಲಿ ಆಮದು ಮಾಡಿಕೊಂಡ ವಾಹನಗಳನ್ನಷ್ಟೇ ಭಾರತದಲ್ಲಿ ಫೋರ್ಡ್ ಮಾರಾಟ ಮಾಡಲಿದೆ.
ಉತ್ಪಾದನ ಘಟಕಗಳನ್ನು ಮುಂದುವರೆಸುವುದು ಲಾಭದಾಯಕವಲ್ಲ ಆದ್ದರಿಂದ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಆದರೆ ಈಗಿರುವ ಗ್ರಾಹಕರಿಗೆ ಸೇವೆಗಳನ್ನು ಒದಗಿಸಲು ಡೀಲರ್ ಗಳಿಗೆ ಬೆಂಬಲ ನೀಡುವುದಾಗಿ ಫೋರ್ಟ್ ಹೇಳಿದೆ. ಫೋರ್ಟ್ ಉತ್ಪಾದನಾ ಘಟಕಗಳನ್ನು ಮುಚ್ಚಲು ನಿರ್ಧರಿಸಿರುವುದನ್ನು ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾಗೆ ಉಂಟಾದ ಹಿನ್ನೆಡೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


