ವಾಣಿಜ್ಯ

ಐಟಿ ಪೋರ್ಟಲ್ ನಲ್ಲಿ ಪೂರ್ತಿಯಾಗಿ ಬಗೆಹರಿಯದ ಸಮಸ್ಯೆ: 1200 ಬಳಕೆದಾರರೊಡನೆ ಇನ್ಫೋಸಿಸ್ ಸಂಪರ್ಕ

ಇದುವರೆಗೂ 3 ಕೋಟಿಗೂ ಹೆಚ್ಚು ಮಂದಿ ಭಾರತೀಯರು ಐಟಿ ಪೋರ್ಟಲ್ ಗೆ ಲಾಗಿನ್ ಆಗಿ ಟ್ರಾನ್ಸಾಕ್ಷನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕೆಲವರಿಗೆ ಮಾತ್ರ ಸಮಸ್ಯೆಗಳು ಎದುರಾಗುತ್ತಿವೆ.

ಐಟಿ ಪೋರ್ಟಲ್ ನಲ್ಲಿ ಪೂರ್ತಿಯಾಗಿ ಬಗೆಹರಿಯದ ಸಮಸ್ಯೆ: 1200 ಬಳಕೆದಾರರೊಡನೆ ಇನ್ಫೋಸಿಸ್ ಸಂಪರ್ಕ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಐಟಿ ಕ್ಷೇತ್ರದ ದಿಗ್ಗಜ, ಆದಾಯ ತೆರಿಗೆ ಜಾಲತಾಣದ ನಿರ್ಮಾತೃ ಸಂಸ್ಥೆ ಇನ್ಫೋಸಿಸ್ ಇನ್ನೂ ಕೆಲ ಬಳಕೆದಾರರು ವೆಬ್ ಪೋರ್ಟಲ್ ನಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುವುದನ್ನು ಒಪ್ಪಿಕೊಂಡಿದೆ. ಆ ಮೂಲಕ ದೇಶದ ಐಟಿ ಪೋರ್ಟಲ್ ಸಮಸ್ಯೆಗೆ ಇನ್ನೂ ಪೂರ್ತಿಯಾಗಿ ಪರಿಹಾರ ಸಿಕ್ಕಿಲ್ಲ ಎನ್ನುವುದು ದೃಢವಾದಂತಾಗಿದೆ. 

ಜೂನ್ ತಿಂಗಳಲ್ಲಿ ಐಟಿ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅಂದಿನಿಂದ ಬಳಕೆದಾರರು ಒಂದಿಲ್ಲೊಂದು ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ದೂರು ಸಲ್ಲಿಸುತ್ತಿದ್ದರು. ಇದುವರೆಗೂ 3 ಕೋಟಿಗೂ ಹೆಚ್ಚು ಮಂದಿ ಭಾರತೀಯರು ಐಟಿ ಪೋರ್ಟಲ್ ಗೆ ಲಾಗಿನ್ ಆಗಿ ಟ್ರಾನ್ಸಾಕ್ಷನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕೆಲವರಿಗೆ ಮಾತ್ರ ಸಮಸ್ಯೆಗಳು ಎದುರಾಗುತ್ತಿವೆ.

ಈಗಾಗಲೇ ಇನ್ಫೋಸಿಸ್ ಸಮಸ್ಯೆ ಎದುರಿಸುತ್ತಿರುವ ಸುಮಾರು 1200 ಮಂದಿ ಬಳಕೆದಾರರೊಡನೆ ಸಂಪರ್ಕದಲ್ಲಿದ್ದು ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

Related Article

ಐ-ಟಿ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ: ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್

ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ: ಐಟಿ ರಿಟರ್ನ್ಸ್ ವೆಬ್ ಸೈಟ್ ತಾಂತ್ರಿಕ ದೋಷ ಕುರಿತು ಇನ್ಫೋಸಿಸ್ ಹೇಳಿಕೆ

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ

ಆದಾಯ ತೆರಿಗೆ ಪೋರ್ಟಲ್ ತಾಂತ್ರಿಕ ದೋಷ: ತಡವಾಗಿ ತೆರಿಗೆ ಪಾವತಿಗೆ ದಂಡ ವಿನಾಯಿತಿ ಸಾಧ್ಯತೆ, ಒತ್ತಡದಲ್ಲಿ ಇನ್ಫೋಸಿಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.