ವಾಣಿಜ್ಯ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.

ಇದರೊಂದಿಗೆ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್‌ ದರ 2012.50ಕ್ಕೆ ಬದಲಾಗಿ 1,976 ರು. ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು  198 ರು. ಕಡಿತ ಮಾಡಿದ್ದವು. ಅದಕ್ಕೂ ಮೊದಲು ಜೂನ್ 1ರಂದು  135 ರು. ದರ ಇಳಿಕೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.