ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್
ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ...

ನವದೆಹಲಿ: ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ ಹೊರಹೊಮ್ಮಿದೆ.
ಜುಲೈ 26ರಂದು ಪ್ರಾರಂಭವಾಗಿದ್ದ ಭಾರತದ 5ಜಿ ಸ್ಪೆಕ್ಟ್ರಂ ಹರಾಜು ಇಂದು ಮುಕ್ತಾಯಗೊಂಡಿದ್ದು, ಒಟ್ಟು 1,50,173 ಕೋಟಿ ರೂಪಾಯಿ ಮೌಲ್ಯದ ಬಿಡ್‌ಗಳನ್ನು ಸ್ವೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋಗೆ ಪ್ರತಿಸ್ಪರ್ಧಿಗಳಾಗಿ ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಹಾಗೂ ಗೌತಮ್ ಅದಾನಿಯವರ ಅದಾನಿ ಎಂಟರ್‌ಪ್ರೈಸಸ್ 5ಜಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.
ಇತ್ತೀಚಿನ ಹರಾಜಿನಲ್ಲಿ ₹ 88,078 ಕೋಟಿಗೆ ಮಾರಾಟವಾದ ಎಲ್ಲಾ ಏರ್‌ವೇವ್‌ಗಳ ಅರ್ಧದಷ್ಟು ಭಾಗವನ್ನು ಜಿಯೋ ಪಡೆದುಕೊಂಡಿದೆ. ಗೌತಮ್ ಅದಾನಿ ಗ್ರೂಪ್ ಖಾಸಗಿ ಟೆಲಿಕಾಂ ನೆಟ್ವರ್ಕ್ ಅನ್ನು ಸ್ಥಾಪಿಸಲು 26 Mhz ಸ್ಪೆಕ್ಟ್ರಮ್ ಅನ್ನು ಖರೀದಿಸಿದೆ. ಟೆಲಿಕಾಂ ದೈತ್ಯ ಸುನಿಲ್ ಭಾರ್ತಿ ಮಿತ್ತಲ್ ಅವರ ಭಾರ್ತಿ ಏರ್ ಟೆಲ್ 43,084 ಕೋಟಿ ಬಿಡ್ ಮಾಡಿದ್ದು ವೊಡಾಫೋನ್ ಐಡಿಯಾ ಲಿಮಿಟೆಡ್ 18,799 ಕೋಟಿಗೆ ಸ್ಪೆಕ್ಟ್ರಂ ಖರೀದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


