ದೇವಸ್ಥಾನದಲ್ಲಿ ರಾಧಿಕಾ ಮರ್ಚೆಂಟ್ ಜತೆ ಅನಂತ್ ಅಂಬಾನಿ ನಿಶ್ಚಿತಾರ್ಥ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು, ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ...

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು, ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ ಎಂದು ಬಿಲಿಯನೇರ್ ಕುಟುಂಬ ಗುರುವಾರ ಪ್ರಕಟಿಸಿದೆ.
ಶೈಲಾ ಮತ್ತು ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಅವರೊಂದಿಗೆ ಅನಂತ್ ಅಂಬಾನಿ ಅವರು ಇಂದು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎರಡೂ ಕುಟುಂಬಗಳ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಧಿಕಾ - ಅನಂತ್ ನಿಶ್ಚಿತಾರ್ಥ ನೆರವೇರಿಸಲಾಯಿತು.
ನಿಶ್ಚಿತಾರ್ಥದ ನಂತರ ಯುವ ದಂಪತಿಗಳು ಭಗವಾನ್ ಶ್ರೀನಾಥಜಿಯ ಆಶೀರ್ವಾದವನ್ನು ಪಡೆದರು ಎಂದು ಅಂಬಾನಿ ಕುಟುಂಬ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ ಮದುವೆ ಯಾವಾಗ ನಡೆಯಲಿದೆ ಎಂಬುದನ್ನು ತಿಳಿಸಿಲ್ಲ. ಇವರಿಬ್ಬರು ಕೆಲ ದಿನಗಳಿಂದ ಸ್ನೇಹಿತರಾಗಿದ್ದರು.
ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಅನಂತ ಅವರು ನೀಲಿ ಬಣ್ಣದ ಸಂಪ್ರದಾಯಿಕ ಕುರ್ತಾ ಧರಿಸಿ ಮಿಂಚಿದರೆ ಇತ್ತ ರಾಧಿಕಾ ಮರ್ಚೆಂಟ್ ಅವರು ಪೀಚ್ ಬಣ್ಣದ ಲೆಹೆಂಗಾ ಧರಿಸಿದ್ದರು.
ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಈ ವರ್ಷದ ಜೂನ್‌ನಲ್ಲಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ರಾಧಿಕಾಗಾಗಿ ಅದ್ದೂರಿ 'ಅರಂಗೇಟ್ರಂ' ಸಮಾರಂಭವನ್ನು ಆಯೋಜಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


