ವಾಣಿಜ್ಯ

4,389 ಕೋಟಿ ರೂ. ಆಮದು ಸುಂಕ ವಂಚನೆ; ಚೀನಾ ಮೂಲದ ಒಪ್ಪೊಗೆ ಭಾರತ ನೋಟಿಸ್

4,389 ಕೋಟಿ ರೂ.ಗಳ ಆಮದು ಸುಂಕ ವಂಚಿಸಿದ ಆರೋಪದ ಮೇಲೆ ಚೀನಾದ ಫೋನ್‌ ತಯಾರಕ ಕಂಪನಿ ಒಪ್ಪೊದ ಭಾರತ ಘಟಕಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.

4,389 ಕೋಟಿ ರೂ. ಆಮದು ಸುಂಕ ವಂಚನೆ; ಚೀನಾ ಮೂಲದ ಒಪ್ಪೊಗೆ ಭಾರತ ನೋಟಿಸ್
ಸಾಂದರ್ಭಿಕ ಚಿತ್ರ
Published On :

ನವದೆಹಲಿ: 4,389 ಕೋಟಿ ರೂ.ಗಳ ಆಮದು ಸುಂಕ ವಂಚಿಸಿದ ಆರೋಪದ ಮೇಲೆ ಚೀನಾದ ಫೋನ್‌ ತಯಾರಕ ಕಂಪನಿ ಒಪ್ಪೊದ ಭಾರತ ಘಟಕಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.

ಕೆಲವು ಆಮದುಗಳು ಮತ್ತು ವಿವಿಧ ಎಂಎನ್ ಸಿಗಳಿಗೆ ರಾಯಧನ ಮತ್ತು ಪರವಾನಗಿ ಶುಲ್ಕಗಳ ರವಾನೆಗಳ ವಿವರಣೆಯಲ್ಲಿ ಉದ್ದೇಶಪೂರ್ವಕ ತಪ್ಪು ಘೋಷಣೆಯನ್ನು ಸೂಚಿಸುವ ದಾಖಲೆಗಳು ಪತ್ತೆಯಾಗಿದ್ದು, ಜುಲೈ 8 ರಂದು ಒಪ್ಪೊ ಇಂಡಿಯಾಗೆ ಶೋಕಾಸ್ ನೋಟಿಸ್(SCN) ಜಾರಿಗೊಳಿಸಲಾಗಿದೆ.

ಗುವಾಂಗ್‌ಡಾಂಗ್ ಒಪ್ಪೊ ಮೊಬೈಲ್ ಟೆಲಿಕಮ್ಯುನಿಕೇಶನ್ಸ್ ಕಾರ್ಪೊರೇಷನ್ ಲಿಮಿಟೆಡ್‌ನ ಅಂಗಸಂಸ್ಥೆಯಾದ Oppo Mobiles India Pvt Ltd ನ ತನಿಖೆಯ ಸಮಯದಲ್ಲಿ, ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಸುಮಾರು 4,389 ಕೋಟಿ ರೂಪಾಯಿಗಳ ಕಸ್ಟಮ್ಸ್ ಸುಂಕ ವಂಚನೆಯನ್ನು ಪತ್ತೆಹಚ್ಚಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಒಪ್ಪೊ ಇಂಡಿಯಾ, ಶೋಕಾಸ್ ನೋಟಿಸ್ ನಲ್ಲಿ ಉಲ್ಲೇಖಿಸಲಾದ ಆರೋಪಗಳ ಬಗ್ಗೆ "ವಿಭಿನ್ನ ದೃಷ್ಟಿಕೋನ" ಹೊಂದಿದೆ ಮತ್ತು ಕಾನೂನು ಪರಿಹಾರಗಳು ಸೇರಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.

ಶೋಕಾಸ್ ನಲ್ಲಿ ಉಲ್ಲೇಖಿಸಲಾದ ಆರೋಪಗಳ ಬಗ್ಗೆ ನಾವು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದೇವೆ. ಇದು ಉದ್ಯಮ-ವ್ಯಾಪಿ ಸಮಸ್ಯೆಯಾಗಿದೆ ಎಂದು ನಾವು ನಂಬುತ್ತೇವೆ. ಒಪ್ಪೊ ಇಂಡಿಯಾ ಶೋಕಾಸ್ ನೋಟಿಸ್ ಅನ್ನು ಪರಿಶೀಲಿಸುತ್ತಿದೆ ಮತ್ತು ನಾವು ನೋಟಿಸ್‌ಗೆ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಚೀನಾ ಮೊಬೈಲ್ ಕಂಪನಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.