ಚಿಲ್ಲರೆ ಹಣದುಬ್ಬರ ಶೇ. 6.77ಕ್ಕೆ ಇಳಿಕೆ, ಇದು ಕಳೆದ ಮೂರು ತಿಂಗಳಲ್ಲೇ ಕಡಿಮೆ
ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 6.77ಕ್ಕೆ ಇಳಿಕೆಯಾಗಿದೆ. ಇದು ಕಳೆದ ಮೂರು ತಿಂಗಳಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 6.77ಕ್ಕೆ ಇಳಿಕೆಯಾಗಿದೆ. ಇದು ಕಳೆದ ಮೂರು ತಿಂಗಳಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 7.4 ರಷ್ಟಿತ್ತು ಮತ್ತು ಆಗಸ್ಟ್ ನಲ್ಲಿ ಇದು ಶೇಕಡಾ 7.01 ರಷ್ಟಿತ್ತು.
ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಲ್ಲಿ ಶೇ. 6.77ಕ್ಕೆ ಇಳಿದರೂ ಭಾರತೀಯ ರಿಸರ್ವ್ ಬ್ಯಾಂಕ್‌ನ ಗುರಿಯಾದ ಶೇ.6.7ರ ಮಿತಿಯನ್ನು ಮೀರಿದೆ.
ಅಕಾಲಿಕ ಮಳೆಯ ಪ್ರಭಾವದ ಹೊರತಾಗಿಯೂ ತರಕಾರಿಗಳ ಬೆಲೆ ಇಳಿಕೆ, ಹಣ್ಣುಗಳು, ಎಣ್ಣೆ ಹಾಗೂ ಇತರೆ ಆಹಾರ ವಸ್ತುಗಳ ಬೆಲೆ ಇಳಿಕೆ ಹಣದುಬ್ಬರವನ್ನು ತಗ್ಗಿಸಲು ಸಹಾಯ ಮಾಡಿದೆ" ಎಂದು ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಅವರು ಹೇಳಿದ್ದಾರೆ.
ಕಚ್ಚಾ ತೈಲ, ಕಬ್ಬಿಣದ ಅದಿರು ಮತ್ತು ಉಕ್ಕಿನ ಬೆಲೆ ಜಾಗತಿಕ ಮಾರುಕಟ್ಟೆಗಳಲ್ಲಿ ತಗ್ಗಿದೆ. ದೇಶಿ ಮಾರುಕಟ್ಟೆಗಳಲ್ಲಿ ವಸ್ತುಗಳ ಪೂರೈಕೆ ಹೆಚ್ಚಿಸಲು ಸರ್ಕಾರ ಕೈಗೊಂಡ ಕ್ರಮಗಳು ಹಣದುಬ್ಬರ ಹೆಚ್ಚಳವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


