ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಚಿಂತನೆ: ವರದಿ
ಅಮೆಜಾನ್ ಈ ವಾರದಿಂದಲೇ ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಸಂಬಂಧಿ ಉದ್ಯೋಗದಲ್ಲಿರುವ ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದೆ. ಕಂಪೆನಿಯ ಇತಿಹಾಸದಲ್ಲಿ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ನವದೆಹಲಿ: ಅಮೆಜಾನ್(Amazon) ಈ ವಾರದಿಂದಲೇ ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಸಂಬಂಧಿ ಉದ್ಯೋಗದಲ್ಲಿರುವ ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದೆ. ಕಂಪೆನಿಯ ಇತಿಹಾಸದಲ್ಲಿ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಅಮೆಜಾನ್ ಕಂಪೆನಿಯ ಸಾಧನಗಳ ವಿಭಾಗ, ವಾಯ್ಸ್ ಸಹಾಯಕ ಅಲೆಕ್ಸಾ, ಚಿಲ್ಲರೆ ವಿಭಾಗ ಮತ್ತು ಮಾನವ ಸಂಪನ್ಮೂಲ ವಿಭಾಗದಿಂದ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಯೋಜನೆಯಿದೆ ಎಂದು ಹೆಸರು ಹೇಳಲು ಇಚ್ಛಿಸದ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಎಷ್ಟು ಮಂದಿಯನ್ನು ಉದ್ಯೋಗದಿಂದ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆ ನಿಖರವಾಗಿ ತಿಳಿದುಬಂದಿಲ್ಲ. ಆದರೆ ಸುಮಾರು 10 ಸಾವಿರ ಉದ್ಯೋಗಿಗಳನ್ನು ತೆಗೆದುಹಾಕಲಾಗುತ್ತದೆ. ಅದು ಅಮೆಜಾನ್‌ನ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಸರಿಸುಮಾರು 3 ಶೇಕಡಾವನ್ನು ಪ್ರತಿನಿಧಿಸುತ್ತದೆ ಮತ್ತು ಅದರ ಜಾಗತಿಕ ಉದ್ಯೋಗಿಗಳ 1.5 ಮಿಲಿಯನ್‌ಗಿಂತಲೂ ಅಧಿಕ ಉದ್ಯೋಗಿಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆಯಿರುತ್ತದೆ.
ಅಮೆಜಾನ್, ಉದ್ಯೋಗಿಗಳನ್ನು ವಜಾಗೊಳಿಸುವ ಇತ್ತೀಚಿನ ತಂತ್ರಜ್ಞಾನ ಕಂಪನಿಯಾಗಲಿದೆ ಎಂದು ವರದಿ ಹೇಳಿದೆ, ಇದು ಇತ್ತೀಚೆಗೆ ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಹೋರಾಡುತ್ತಿತ್ತು. ಈ ವರ್ಷದ ಆರಂಭದಲ್ಲಿ, ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಟೆಕ್ ಕೆಲಸಗಾರರಿಗೆ ನಗದು ಪರಿಹಾರದ ಮಿತಿಯನ್ನು ದ್ವಿಗುಣಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


