ವಾಣಿಜ್ಯ

ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆ ಕೊನೆಯ ದಿನ ಅಕ್ಟೋಬರ್ 7 ರವರೆಗೆ ವಿಸ್ತರಿಸಿದ ಕೇಂದ್ರ

ಆದಾಯ ತೆರಿಗೆ ಇಲಾಖೆಯು 2021-22ನೇ ಹಣಕಾಸು ವರ್ಷಕ್ಕೆ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 7 ರವರೆಗೆ 7 ದಿನ ಕಾಲ ವಿಸ್ತರಿಸಿದೆ.

ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆ ಕೊನೆಯ ದಿನ ಅಕ್ಟೋಬರ್ 7 ರವರೆಗೆ ವಿಸ್ತರಿಸಿದ ಕೇಂದ್ರ
ಆದಾಯ ತೆರಿಗೆ ಇಲಾಖೆ
Published On :

ನವದೆಹಲಿ: ಆದಾಯ ತೆರಿಗೆ ಇಲಾಖೆಯು 2021-22ನೇ ಹಣಕಾಸು ವರ್ಷಕ್ಕೆ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 7 ರವರೆಗೆ 7 ದಿನ ಕಾಲ ವಿಸ್ತರಿಸಿದೆ.

"2022-23ರ ಮೌಲ್ಯಮಾಪನ ವರ್ಷಕ್ಕೆ ಲೆಕ್ಕಪರಿಶೋಧನೆಯ ವಿವಿಧ ವರದಿಗಳನ್ನು ಸಲ್ಲಿಸುವಲ್ಲಿ ತೆರಿಗೆದಾರರು ಮತ್ತು ಇತರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(CBDT) ಲೆಕ್ಕಪರಿಶೋಧನೆಯ ವಿವಿಧ ವರದಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಆದಾಯ ತೆರಿಗೆ ಕಾಯ್ದೆಯಡಿ, ಚಾರ್ಟರ್ಡ್ ಅಕೌಂಟೆಂಟ್‌ನಿಂದ ತಮ್ಮ ಖಾತೆಗಳನ್ನು ಆಡಿಟ್ ಮಾಡಬೇಕಾದ ತೆರಿಗೆದಾರರು ಸೆಪ್ಟೆಂಬರ್ 30 ರೊಳಗೆ ತೆರಿಗೆ ಲೆಕ್ಕಪರಿಶೋಧನಾ ವರದಿಯನ್ನು ಐಟಿ ಇಲಾಖೆಗೆ ಸಲ್ಲಿಸಬೇಕಾಗಿತ್ತು. ಈಗ ಅದನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.