ಗೂಗಲ್ ಗೆ ಸ್ಪರ್ಧಾತ್ಮಕ ಆಯೋಗದಿಂದ 1,337 ಕೋಟಿ ರೂ. ದಂಡ
ಸ್ಪರ್ಧಾತ್ಮಕ ಆಯೋಗ ಗೂಗಲ್ ಸಂಸ್ಥೆಗೆ 1,337 ಕೋಟಿ ರೂಪಾಯಿ ದಂಡ ವಿಧಿಸಿದೆ. ಆಂಡ್ರಾಯ್ಡ್ ಮೊಬೈಲ್ ಡಿವೈಸ್ ಸಂಬಂಧಿತ ಬಹು ಮಾರುಕಟ್ಟೆಗಳಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಈ ದಂಡವನ್ನು ವಿಧಿಸಿದೆ.

ನವದೆಹಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗ ಗೂಗಲ್ ಸಂಸ್ಥೆಗೆ 1,337 ಕೋಟಿ ರೂಪಾಯಿ ದಂಡ ವಿಧಿಸಿದೆ. ಆಂಡ್ರಾಯ್ಡ್ ಮೊಬೈಲ್ ಡಿವೈಸ್ ಸಂಬಂಧಿತ ಬಹು ಮಾರುಕಟ್ಟೆಗಳಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಈ ದಂಡವನ್ನು ವಿಧಿಸಿದೆ.
ಅಲ್ಲದೆ, ಅನ್ಯಾಯದ ವ್ಯವಹಾರವನ್ನು ನಿಲ್ಲಿಸುವಂತೆ ಇಂಟರ್ನೆಟ್ ದೈತ್ಯ ಸಂಸ್ಥೆಗೆ ನ್ಯಾಯೋಚಿತ ವ್ಯಾಪಾರ ನಿಯಂತ್ರಕವು ನಿರ್ದೇಶಿಸಿದೆ. ನಿರ್ದಿಷ್ಟ ಸಮಯದೊಳಗೆ ತನ್ನ ನಡತೆಯನ್ನು ಸರಿಪಡಿಸಿಕೊಳ್ಳುವಂತೆ ಭಾರತೀಯ ಸ್ಪರ್ಧಾತ್ಮಕ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
2019 ಏಪ್ರಿಲ್ ನಲ್ಲಿ ದೇಶದಲ್ಲಿ ಆಂಡ್ರಾಯ್ಡ್ ಆಧಾರಿತ ಸ್ಮಾರ್ಟ್‌ಫೋನ್ ಗ್ರಾಹಕರ ದೂರುಗಳ ನಂತರ ನಿಯಂತ್ರಕರು ಈ ವಿಷಯದಲ್ಲಿ ವಿವರವಾದ ತನಿಖೆಗೆ ಆದೇಶಿಸಿತ್ತು.
ಮೊಬೈಲ್ ಆ್ಯಪ್ ವಿತರಣೆ ಒಪ್ಪಂದ (ಎಂಎಡಿಎ) ಮತ್ತುವಿಘಟನೆ ವಿರೋಧಿ ಒಪ್ಪಂದ ( ಎಎಫ್ ಎ) ಸಂಬಂಧಿಸಿದಂತೆ ಅಕ್ರಮ ವ್ಯವಹಾರದ ಆರೋಪ ಕೇಳಿಬಂದಿದೆ. ಮಾರುಕಟ್ಟೆಯಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ ಗೂಗಲ್ ಸಂಸ್ಥೆಗೆ 1,337 ಕೋಟಿ ರೂ. ದಂಡ ವಿಧಿಸಿರುವುದಾಗಿ ಭಾರತೀಯ ಸ್ಪರ್ಧಾತ್ಮಕ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


