ಆರ್‌ಬಿಐ: ಸಾಲ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಳ, ರೆಪೊ ದರ ಏರಿಕೆ
ದೇಶದ ಅರ್ಥವ್ಯವಸ್ಥೆಯಲ್ಲಿ ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90ಕ್ಕೆ ಏರಿಕೆ ಮಾಡಿದೆ.

ಮುಂಬೈ: ದೇಶದ ಅರ್ಥವ್ಯವಸ್ಥೆಯಲ್ಲಿ ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90ಕ್ಕೆ ಏರಿಕೆ ಮಾಡಿದೆ.
ಇಂದಿನ ಏರಿಕೆಯೊಂದಿಗೆ, ರೆಪೊ ದರ ಅಥವಾ ಬ್ಯಾಂಕ್‌ಗಳು ಕೇಂದ್ರ ಬ್ಯಾಂಕ್‌ನಿಂದ ಸಾಲ ಪಡೆಯುವ ಅಲ್ಪಾವಧಿ ಸಾಲದ ದರವು ಈಗ ಶೇಕಡಾ 6ಕ್ಕೆ ಸಮೀಪವಾಗಲಿದೆ.
ಕಳೆದ ಮೇ ತಿಂಗಳಲ್ಲಿ 40 ಬೇಸಿಸ್ ಪಾಯಿಂಟ್‌ಗಳ ಹೆಚ್ಚಳ ಮತ್ತು ಜೂನ್ ಮತ್ತು ಆಗಸ್ಟ್‌ನಲ್ಲಿ ತಲಾ 50 ಬೇಸಿಸ್ ಪಾಯಿಂಟ್‌ಗಳ ಹೆಚ್ಚಳದ ನಂತರ ಆರ್ ಬಿಐನ ಇದು ಸತತ ನಾಲ್ಕನೇ ದರ ಏರಿಕೆಯಾಗಿದೆ. ಒಟ್ಟಾರೆಯಾಗಿ, ಈ ವರ್ಷದ ಮೇ ತಿಂಗಳಿನಿಂದ ಆರ್‌ಬಿಐ ರೆಪೊ ದರವನ್ನು ಶೇಕಡಾ 1.90 ರಷ್ಟು ಹೆಚ್ಚಿಸಿದೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC) ದರ ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿತು.
ಆರ್‌ಬಿಐ ತನ್ನ ರೆಪೊ ದರವನ್ನು ನಿಗದಿಪಡಿಸುವಾಗ ಗ್ರಾಹಕ ಬೆಲೆ ಸೂಚ್ಯಂಕ (CPI) ಆಧಾರಿತ ಹಣದುಬ್ಬರವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿದ್ದು, ಅದು ಆಗಸ್ಟ್‌ನಲ್ಲಿ ಶೇಕಡಾ 7 ರಷ್ಟಿತ್ತು. ಚಿಲ್ಲರೆ ಹಣದುಬ್ಬರವು ಈ ವರ್ಷದ ಜನವರಿಯಿಂದ ಶೇಕಡಾ 6ರಷ್ಟಿದೆ.
ಆರ್ ಬಿಐ ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರ ಪ್ರಕ್ಷೇಪಣವನ್ನು ಶೇಕಡಾ 6.7 ರಷ್ಟನ್ನು ಉಳಿಸಿಕೊಂಡಿದೆ. ನೈಜ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಮುಂದಿನ ಹಣಕಾಸು ವರ್ಷದಲ್ಲಿ ಶೇಕಡಾ 7.2ಕ್ಕಿಂತ ಶೇಕಡಾ 7ಕ್ಕೆ ಇಳಿಸಿದ್ದಾರೆ.
ಇತ್ತೀಚಿನ ಆರ್‌ಬಿಐ ಕ್ರಮವು ಯುಎಸ್ ಫೆಡರಲ್ ರಿಸರ್ವ್ ಮೇಲೆ ಅವಲಂಬಿತವಾಗಿದ್ದು, ಸತತ ಮೂರನೇ 0.75 ಶೇಕಡಾ ಪಾಯಿಂಟ್ ಬಡ್ಡಿದರದ ಹೆಚ್ಚಳವನ್ನು ಅನುಸರಿಸುತ್ತದೆ.
ರೆಪೊ ದರ (Repo rate): ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.
ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.
ರಿವರ್ಸ್ ರೆಪೊ ದರ (Reverse repo rate): ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


