ತಗ್ಗಿದ ಆಹಾರ ಪದಾರ್ಥಗಳ ಬೆಲೆ; ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ. 6.71ಕ್ಕೆ ಇಳಿಕೆ
ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 6.71 ಇಳಿಕೆಯಾಗಿದೆ. ಇದು ಮಾರ್ಚ್ ನಂತರದ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 6.71 ಇಳಿಕೆಯಾಗಿದೆ. ಇದು ಮಾರ್ಚ್ ನಂತರದ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.
ಕಳೆದ ಜೂನ್‌ನಲ್ಲಿ, ಚಿಲ್ಲರೆ ಹಣದುಬ್ಬರವು ಶೇಕಡಾ 7.01 ರಷ್ಟಿತ್ತು ಮತ್ತು ಜುಲೈ 2021 ರಲ್ಲಿ ಇದು ಶೇಕಡಾ 5.59 ರಷ್ಟಿತ್ತು.
ಸರ್ಕಾರಿ ಅಂಕಿ ಅಂಶಗಳ ಪ್ರಕಾರ, ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇಕಡಾ 7.75 ರಷ್ಟು ಇತ್ತು. ಇದು ಜುಲೈ 2022 ರಲ್ಲಿ ಶೇಕಡಾ 6.75 ಕ್ಕೆ ಇಳಿಕೆಯಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ಜುಲೈ ತಿಂಗಳಲ್ಲಿ ಶೇ. 6.71ಕ್ಕೆ ಇಳಿದರೂ ಭಾರತೀಯ ರಿಸರ್ವ್ ಬ್ಯಾಂಕ್‌ನ ಗುರಿಯ ಮೇಲಿನ ಮಿತಿಯನ್ನು ಮೀರಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕಿಂತ ಹೆಚ್ಚಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


