ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆ
ಹೋಟೆಲ್‌ಗಳು, ರೆಸ್ಟೊರೆಂಟ್‌ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಶುಕ್ರವಾರ 198 ರೂಪಾಯಿ ಕಡಿತಗೊಳಿಸಲಾಗಿದೆ.

ನವದೆಹಲಿ: ಹೋಟೆಲ್‌ಗಳು, ರೆಸ್ಟೊರೆಂಟ್‌ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಶುಕ್ರವಾರ 198 ರೂಪಾಯಿ ಕಡಿತಗೊಳಿಸಲಾಗಿದೆ.
ಈ ಬೆಲೆ ಇಳಿಕೆಯೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‌ಪಿಜಿ) ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿದಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಜೂನ್‌ನಲ್ಲಿ 19 ಕೆಜಿ ಸಿಲಿಂಡರ್ ಗೆ 135 ರೂಪಾಯಿ ಕಡಿಮೆಯಾಗಿತ್ತು. ಆದಾಗ್ಯೂ, ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗುವಂತೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


