ಅಕ್ಟೋಬರ್ನಲ್ಲಿ ದಾಖಲೆಯ 1.52 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ
ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 16.5 ರಷ್ಟು ಏರಿಕೆಯಾಗಿದ್ದು, ಜಿಎಸ್ ಟಿ ಕಲೆಕ್ಷನ್ ದಾಖಲೆಯ 1.52 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಮತ್ತು ಇದು ಇದುವರೆಗಿನ...

ನವದೆಹಲಿ: ಕಳೆದ ಅಕ್ಟೋಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 16.5 ರಷ್ಟು ಏರಿಕೆಯಾಗಿದ್ದು, ಜಿಎಸ್ ಟಿ ಕಲೆಕ್ಷನ್ ದಾಖಲೆಯ 1.52 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಮತ್ತು ಇದು ಇದುವರೆಗಿನ ಎರಡನೇ ಅತಿ ಹೆಚ್ಚು ಸಂಗ್ರಹವಾಗಿದೆ.
ಹಬ್ಬದ ದಿನಗಳು ತೆರಿಗೆ ಸಂಗ್ರಹ ಹೆಚ್ಚಳ ಪ್ರವೃತ್ತಿ ಮುಂದುವರಿಯಲು ಸಹಾಯ ಮಾಡಿದ್ದು, ಅಕ್ಟೋಬರ್ನಲ್ಲಿ 1,51,718 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್ಟಿ 26,039 ಕೋಟಿ ರೂ. ಹಾಗೂ ರಾಜ್ಯ ಜಿಎಸ್ಟಿ 33,396 ಕೋಟಿ ರೂ. ಸಂಗ್ರಹವಾಗಿದೆ.
ಅಕ್ಟೋಬರ್ 2022 ರಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್ಟಿ ಆದಾಯ ಕಳೆದ ವರ್ಷದ ಅಕ್ಟೋಬರ್ ಗಿಂತ ಶೇ. 16.6 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.
ಈ ಹಿಂದೆ ಏಪ್ರಿಲ್ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಅದು ಬಿಟ್ಟರೆ ಈಗ ಅಕ್ಟೋಬರ್ನಲ್ಲಿ ಆಗಿರುವ 1.51 ಲಕ್ಷ ಕೋಟಿ ರೂ. ಸಂಗ್ರಹ ಎರಡನೇ ಅತಿಹೆಚ್ಚಿನ ಸಂಗ್ರಹವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


