ವಾಣಿಜ್ಯ

ಏರ್ ಇಂಡಿಯಾಗೆ ಆರು ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿ ನೇಮಕ

ವಿಮಾನ ಸಿಬ್ಬಂದಿ ಮತ್ತು ಇತರ ಕಾರ್ಯಗಳಾದ್ಯಂತ ಕಳೆದ 6 ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿರುವುದಾಗಿ ಏರ್ ಇಂಡಿಯಾ ಗುರುವಾರ ತಿಳಿಸಿದೆ.

ಏರ್ ಇಂಡಿಯಾಗೆ ಆರು ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿ ನೇಮಕ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ವಿಮಾನ ಸಿಬ್ಬಂದಿ ಮತ್ತು ಇತರ ಕಾರ್ಯಗಳಾದ್ಯಂತ ಕಳೆದ 6 ತಿಂಗಳಲ್ಲಿ 3,800ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿರುವುದಾಗಿ ಏರ್ ಇಂಡಿಯಾ ಗುರುವಾರ ತಿಳಿಸಿದೆ.

ನಷ್ಟದಲ್ಲಿದ್ದ ಏರ್ ಇಂಡಿಯಾವನ್ನು ಕಳೆದ ವರ್ಷ ಜನವರಿಯಲ್ಲಿ ತನ್ನ ವಶಕ್ಕೆ ಪಡೆದ ಟಾಟಾ ಗ್ರೂಪ್‌, ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಲ್ಲಿ 200 ಮಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿದೆ ಮತ್ತು ಅಸ್ತಿತ್ವದಲ್ಲಿರುವ ವಿಮಾನಗಳನ್ನು ಸಂಪೂರ್ಣವಾಗಿ ನವೀಕರಿಸಲು 400 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಬದ್ಧವಾಗಿದೆ.

ಏರ್ ಇಂಡಿಯಾ ವಿಸ್ತರಣಾ ಯೋಜನೆಯ ಭಾಗವಾಗಿ ಬೋಯಿಂಗ್ ಮತ್ತು ಏರ್‌ಬಸ್‌ನೊಂದಿಗೆ 470 ಹೊಸ ವಿಮಾನಗಳಿಗೆ ದೃಢವಾದ ಆರ್ಡರ್‌ ಕೂಡ ಏರ್ ಇಂಡಿಯಾ ನೀಡಿದೆ.

ಬದಲಾವಣೆ ಪ್ರಯಾಣದ ಮೊದಲ ಆರು ತಿಂಗಳಲ್ಲಿ ಏರ್ ಇಂಡಿಯಾ ಅನೇಕ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಮಹತ್ತರವಾದ ದಾಪುಗಾಲು ಇಟ್ಟಿದೆ ಮತ್ತು ಬೆಳವಣಿಗೆಗೆ ಅಡಿಪಾಯ ಹಾಕಿದೆ ಎಂದು ಏರ್ ಇಂಡಿಯಾ ಸಿಇಒ ಮತ್ತು ಎಂಡಿ ಕ್ಯಾಂಪ್‌ಬೆಲ್ ವಿಲ್ಸನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.