ವಿಜಯ್ ಮಲ್ಯ, ನೀರವ್ ಮೋದಿ ಸೇರಿ ಪರಾರಿಯಾದ ಆರ್ಥಿಕ ಅಪರಾಧಿಗಳಿಂದ 15,000 ಕೋಟಿ ರೂ. ವಸೂಲಿ: ಕೇಂದ್ರ
ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಆರೋಪಿಗಳಿಂದ 15,113 ಕೋಟಿ ರೂ.ಗಳನ್ನು ಸರ್ಕಾರ ವಸೂಲಿ ಮಾಡಿದೆ ಮತ್ತು ಆ ಹಣವನ್ನು ಸಾರ್ವಜನಿಕ ವಲಯದ...

ನವದೆಹಲಿ: ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಆರೋಪಿಗಳಿಂದ 15,113 ಕೋಟಿ ರೂ.ಗಳನ್ನು ಸರ್ಕಾರ ವಸೂಲಿ ಮಾಡಿದೆ ಮತ್ತು ಆ ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರತಿಯೊಬ್ಬ ಆರೋಪಿಯಿಂದ ವಸೂಲಿಯಾದ ನಿಖರ ಮೊತ್ತದ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಪರಾರಿಯಾಗಿರುವ 19 ಮಂದಿಯ ಪೈಕಿ ಮಲ್ಯ, ಮೋದಿ, ನಿತಿನ್ ಜಯಂತಿಲಾಲ್ ಸಂದೇಸರ, ಚೇತನ್ ಜಯಂತಿಲಾಲ್ ಸಂದೇಸರ, ದೀಪ್ತಿ ಚೇತನ್ ಜಯಂತಿಲಾಲ್ ಸಂದೇಸರ, ಹಿತೇಶ್ ಕುಮಾರ್ ನರೇಂದ್ರಭಾಯಿ ಪಟೇಲ್, ಜುನೈದ್ ಇಕ್ಬಾಲ್ ಮೆಮನ್, ಹಜ್ರಾ ಇಕ್ಬಾಲ್ ಮೆಮನ್, ಆಸಿಫ್ ಇಕ್ಬಾಲ್ ಮೆಮನ್ ಮತ್ತು ರಾಮಚಂದ್ರನ್ ವಿಶ್ವನಾಥನ್ ಸೇರಿದಂತೆ ಹತ್ತು ಮಂದಿಯನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಎಂದು ಘೋಷಿಸಲಾಗಿದೆ. ಈ ಹತ್ತು ಜನ ಸುಮಾರು 40,000 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಜಾರಿ ನಿರ್ದೇಶನಾಲಯವು ಇತರ ಒಂಬತ್ತು ಮಂದಿಯ ವಿರುದ್ಧವೂ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆ, 2018(FEOA) ಅಡಿಯಲ್ಲಿ ಕೇಸ್ ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


