ವಾಣಿಜ್ಯ

ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!

2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್‌ನ ಮೊದಲ ದಿನವೇ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!
ಸಂಗ್ರಹ ಚಿತ್ರ
Published On :

ನವದೆಹಲಿ: 2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್‌ನ ಮೊದಲ ದಿನವೇ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಿದ್ದು, ಇಂದಿನಿಂದಲೇ (ಡಿಸೆಂಬರ್ 1, ಶುಕ್ರವಾರ) ಹೊಸ ದರ ಅನ್ವಯವಾಗಲಿದೆ.

ದರ ಹೆಚ್ಚಳದ ಬಳಿಕ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ  1796.50 ರೂಪಾಯಿಗೆ ಏರಿಕೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯ ಬೆಲೆಯಾಗಿದ್ದು, ಇದೇ ಬೆಲೆ ವಾಣಿಜ್ಯ ನಗರಿ ಮುಂಬೈನಲ್ಲಿ 1,749 ರೂಪಾಯಿಗೆ ಜಿಗಿತವಾಗಿದೆ.

ಕರ್ನಾಕಟ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904 ರೂಪಾಯಿಗೆ ಏರಿಕೆಯಾಗಿದೆ. ಹೊಸದಾಗಿ ಬೆಲೆ ಪರಿಷ್ಕರಣೆ ಬಳಿಕ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,968.5 ರೂಪಾಯಿ ಹಾಗೂ ಕೋಲ್ಕತ್ತದಲ್ಲಿ 1,908 ರೂಪಾಯಿ ಇದೆ.

14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.

ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.

ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಂದು ಏವಿಯೇಷನ್ ​​ಟರ್ಬೈನ್ ಇಂಧನದ (ಎಟಿಎಫ್) ಬೆಲೆಯನ್ನು ಕಡಿಮೆ ಮಾಡಿದೆ. ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಈಗ ರಾಜಧಾನಿ ದೆಹಲಿಯಲ್ಲಿ 1,06,155.67 ರೂ., ಕೋಲ್ಕತ್ತಾದಲ್ಲಿ 1,44,639.70 ರೂ., ಮುಂಬೈನಲ್ಲಿ 99,223.44 ರೂ. ಮತ್ತು ಚೆನ್ನೈನಲ್ಲಿ ಪ್ರತಿ ಕಿಲೋ ಲೀಟರ್‌ಗೆ 1,09,966.39 ರೂ.ಗೆ ಸಿಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.