ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'
ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.

ಆನಂದ್: ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.
ಆನಂದ್ ನಗರದ ಪ್ರಧಾನ ಕಚೇರಿಯ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ಮಾತನಾಡಿ, ಹಾಲಿನ ಬೆಲೆ ಏರಿಕೆ ಗುಜರಾತ್ ರಾಜ್ಯಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಗುಜರಾತ್ ಹೊರತುಪಡಿಸಿ ದೆಹಲಿ, ಕೋಲ್ಕತ್ತಾ ಮತ್ತು ಮುಂಬೈನಂತಹ ಇತರ ಮಾರುಕಟ್ಟೆಗಳಲ್ಲಿ ನಾವು ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದೇವೆ. ಸದ್ಯಕ್ಕೆ ಗುಜರಾತ್‌ನಲ್ಲಿ ಹಾಲಿನ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಹೊಸ ಬೆಲೆಗಳು ಶುಕ್ರವಾರ ಬೆಳಿಗ್ಗೆಯಿಂದ ಜಾರಿಗೆ ಬರುತ್ತವೆ ಎಂದು ಜಿಸಿಎಂಎಂಎಫ್ ತನ್ನ ಮುಂಬೈ ಕಚೇರಿ ಮೂಲಕ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಬೆಲೆ ಏರಿಕೆಯೊಂದಿಗೆ ಅಮುಲ್ ತಾಜಾ ಹಾಲಿನ ಒಂದು ಲೀಟರ್ ಪೌಚ್ ಈಗ 54 ರೂ. ಆಗಿದ್ದು, ಒಂದು ಲೀಟರ್ ಅಮುಲ್ ಗೋಲ್ಡ್ 66 ರೂ.ಗೆ ಮಾರಾಟವಾಗಲಿದೆ. ಒಂದು ಲೀಟರ್ ಹಸುವಿನ ಹಾಲಿನ ಬೆಲೆ ಈಗ 56 ರೂ. ಆಗಿದ್ದು, ಅಮುಲ್ ಎ2 ಎಮ್ಮೆಯ ಹಾಲಿನ ಪೌಚ್ ಶುಕ್ರವಾರದಿಂದ 70 ರೂ.ಗೆ ಮಾರಾಟವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


