ಕಾಶ್ಮೀರದಲ್ಲಿ ಉಕ್ಕಿನ ಸ್ಥಾವರ ನಿರ್ಮಾಣಕ್ಕೆ JSW ಸ್ಟೀಲ್ ಶಂಕುಸ್ಥಾಪನೆ
ಪ್ರಮುಖ ಬೆಳವಣಿಗೆಯಲ್ಲಿ, ಭಯೋತ್ಪಾದನೆ ಪೀಡಿತ ಕಾಶ್ಮೀರದಲ್ಲಿ ಖಾಸಗಿ ಹೂಡಿಕೆಯನ್ನು ಆರಂಭಿಸಿರುವ ಸಜ್ಜನ್ ಜಿಂದಾಲ್ ನೇತೃತ್ವದ ಜೆಎಸ್ಡಬ್ಲ್ಯೂ ಸ್ಟೀಲ್ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಉಕ್ಕಿನ ಸ್ಥಾವರಕ್ಕೆ...

ಶ್ರೀನಗರ: ಪ್ರಮುಖ ಬೆಳವಣಿಗೆಯಲ್ಲಿ, ಭಯೋತ್ಪಾದನೆ ಪೀಡಿತ ಕಾಶ್ಮೀರದಲ್ಲಿ ಖಾಸಗಿ ಹೂಡಿಕೆಯನ್ನು ಆರಂಭಿಸಿರುವ ಸಜ್ಜನ್ ಜಿಂದಾಲ್ ನೇತೃತ್ವದ ಜೆಎಸ್ಡಬ್ಲ್ಯೂ ಸ್ಟೀಲ್ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಉಕ್ಕಿನ ಸ್ಥಾವರಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿದೆ.
"ಕಾಶ್ಮೀರದ ಹೃದಯಭಾಗವಾದ ಪುಲ್ವಾಮಾದಲ್ಲಿ ನಮ್ಮ ಹೊಸ ಸ್ಟೀಲ್ ಪ್ರೊಸೆಸಿಂಗ್ ಘಟಕಕ್ಕೆ ನಾವು ಇಂದು ಅಡಿಪಾಯ ಹಾಕಿದ್ದೇವೆ ಎಂದು ಘೋಷಿಸಲು ಸಂತೋಷವಾಗುತ್ತಿದೆ! ಸುಂದರ ಜಮ್ಮು ಕಾಶ್ಮೀರದ ಬೆಳವಣಿಗೆಗೆ JSW ಸ್ಟೀಲ್ ತನ್ನ ಕೊಡುಗೆ ನೀಡುತ್ತಿದೆ ಎಂದು ಜೆಎಸ್ಡಬ್ಲ್ಯು ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ಅವರು ಟ್ವೀಟ್ ಮಾಡಿದ್ದಾರೆ.
ಪುಲ್ವಾಮಾದಲ್ಲಿ ಉಕ್ಕಿನ ಸ್ಥಾವರದ ಶಂಕುಸ್ಥಾಪನೆ ಸಮಾರಂಭದ ಚಿತ್ರಗಳನ್ನು ಜಿಂದಾಲ್ ಅವರು ಟ್ವೀಟ್ ಮೂಲಕ ಬಿಡುಗಡೆ ಮಾಡಿದ್ದಾರೆ.
ಜೆಎಸ್ಡಬ್ಲ್ಯು ಕಾಶ್ಮೀರದಲ್ಲಿ ಹೂಡಿಕೆ ಮತ್ತು ಕೆಲಸವನ್ನು ಪ್ರಾರಂಭಿಸಿದ ಮೊದಲ ಗ್ರೂಪ್ ಆಗಿದೆ. ಪುಲ್ವಾಮಾದ ಲಾಸ್ಸಿಪೋರಾ ಕೈಗಾರಿಕಾ ಪ್ರದೇಶದಲ್ಲಿ ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಿರುವ 70 ಕನಾಲ್ (8.75 ಎಕರೆ) ಭೂಮಿಯಲ್ಲಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಉಕ್ಕಿನ ಕಾರ್ಖಾನೆಯನ್ನು ಸ್ಥಾಪಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


