ಜಿಎಸ್ ಟಿ ಆದಾಯ ಶೇ.15 ರಷ್ಟು ಹೆಚ್ಚಳ, ಡಿಸೆಂಬರ್ ನಲ್ಲಿ 1.49 ಲಕ್ಷ ಕೋಟಿ ರೂ. ಸಂಗ್ರಹ
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 1.49 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 1.49 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.
ತೆರಿಗೆ ಸಂಗ್ರಹ ಹೆಚ್ಚಳ ಪ್ರವೃತ್ತಿ ಮುಂದುವರೆದಿದ್ದು, ಸತತ 10ನೇ ತಿಂಗಳು ಜಿಎಸ್ ಟಿ ಸಂಗ್ರಹ 1.40 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ.
ಕಳೆದ ಡಿಸೆಂಬರ್ ನಲ್ಲಿ ಒಟ್ಟು 1,49,507 ಕೋಟಿ ರೂ ಜಿಎಸ್ ಟಿ ಸಂಗ್ರಹವಾಗಿದ್ದು, ಈ ಪೈಕಿ ಕೇಂದ್ರ ಜಿಎಸ್‌ಟಿ (ಸಿಜಿಎಸ್‌ಟಿ) 26,711 ಕೋಟಿ, ರಾಜ್ಯ ಜಿಎಸ್‌ಟಿ ಅಡಿಯಲ್ಲಿ 33,357 ಕೋಟಿ ರೂ. ಮತ್ತು ಇಂಟಿಗ್ರೇಟೆಡ್ ಜಿಎಸ್‌ಟಿ ಅಡಿಯಲ್ಲಿ 78,434 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಡಿಸೆಂಬರ್ 2022 ರಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್‌ಟಿ ಆದಾಯ ಕಳೆದ ವರ್ಷದ ಡಿಸೆಂಬರ್ ಗಿಂತ ಶೇ. 11 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಈ ಹಿಂದೆ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಅದು ಬಿಟ್ಟರೆ ಕಳೆದ ಅಕ್ಟೋಬರ್ನಲ್ಲಿ ಆಗಿರುವ 1.51 ಲಕ್ಷ ಕೋಟಿ ರೂ. ಸಂಗ್ರಹ ಎರಡನೇ ಅತಿಹೆಚ್ಚಿನ ಸಂಗ್ರಹವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


