ರತನ್ ಟಾಟಾ ಆಪ್ತ, ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್.ಕೃಷ್ಣಕುಮಾರ್ ವಿಧಿವಶ
ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್.ಕೆ.ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮುಂಬಯಿ: ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್. ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೃಷ್ಣಕುಮಾರ್ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ ಮೂಲದ ಕೃಷ್ಣಕುಮಾರ್ ಅವರಿಗೆ 84 ವರ್ಷ ವಯಸ್ಸಾಗಿತ್ತು, ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು.
ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತ, ಸಹೋದ್ಯೋಗಿ ಅವರ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ. ಅವರು ಟಾಟಾ ಸಮೂಹ ಮತ್ತು ಟಾಟಾ ಟ್ರಸ್ಟ್‌ನ ನಿಜವಾದ ದಿಗ್ಗಜರಾಗಿದ್ದು, ನಮಗೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಸಹ ಸಂತಾಪ ಸೂಚಿಸಿದ್ದು, ಟಾಟಾ ಸಮೂಹಕ್ಕೆ ಕೃಷ್ಣಕುಮಾರ್ ನೀಡಿದ್ದ ಅಗಾಧ ಕೊಡುಗೆಯನ್ನು ಸ್ಮರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


