ಚಿಲ್ಲರೆ ಹಣದುಬ್ಬರ ಶೇ.5.72ಕ್ಕೆ ಇಳಿಕೆ, ಇದು ಕಳೆದ ಒಂದು ವರ್ಷದಲ್ಲೇ ಕಡಿಮೆ
ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 5.72ಕ್ಕೆ ಇಳಿಕೆಯಾಗಿದೆ. ಇದು ಕಳೆದ ಒಂದು ವರ್ಷದಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

ನವದೆಹಲಿ: ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 5.72ಕ್ಕೆ ಇಳಿಕೆಯಾಗಿದೆ. ಇದು ಕಳೆದ ಒಂದು ವರ್ಷದಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.
ಇಂದು ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ, ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ನವೆಂಬರ್ 2022 ರಲ್ಲಿ ಶೇ. 5.88 ರಷ್ಟು ಇತ್ತು ಮತ್ತು ಡಿಸೆಂಬರ್ 2021 ರಲ್ಲಿಅದು ಶೇಕಡಾ 5.66 ರಷ್ಟಿತ್ತು.
ರಾಷ್ಟ್ರೀಯ ಅಂಕಿಅಂಶಗಳ ಕಚೇರಿ(NSO) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ ವರ್ಷದ ನವೆಂಬರ್‌ನಲ್ಲಿ ಶೇ. 4.67 ರಷ್ಟು ಇದ್ದ ಆಹಾರ ಹಣದುಬ್ಬರವು ಡಿಸೆಂಬರ್‌ನಲ್ಲಿ ಶೇ. 4.19ಕ್ಕೆ ಇಳಿಕೆಯಾಗಿದೆ.
ಹಣದುಬ್ಬರ ಕಡಿಮೆ ಮಾಡುವ ಸಲುವಾಗಿ ಆರ್ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು. 2026 ಮಾರ್ಚ್ ಒಳಗಾಗಿ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 2ರಿಂದ 4ರ ಮಟ್ಟದಲ್ಲಿ ಇರುವಂತೆ ಮಾಡುವುದು ಆರ್ಬಿಐ ಗುರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


