ನಾನೂ ಮಧ್ಯಮ ವರ್ಗದಿಂದ ಬಂದವಳು, ಅವರ ಒತ್ತಡ ಅರ್ಥವಾಗುತ್ತೆ: ನಿರ್ಮಲಾ ಸೀತಾರಾಮನ್
ನಾನು ಸಹ ಮಧ್ಯಮ ವರ್ಗದ ಕುಟುಂಬದಿಂದ ಬಂದಳು. ಹೀಗಾಗಿ ಮಧ್ಯಮ ವರ್ಗದವರ ಒತ್ತಡದ ಬಗ್ಗೆ ನನಗೂ ಅರ್ಥವಾಗುತ್ತದೆ. ಆದರೆ ಪ್ರಸ್ತುತ ಸರ್ಕಾರವು ಅವರ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ...

ನವದೆಹಲಿ: ನಾನು ಸಹ ಮಧ್ಯಮ ವರ್ಗದ ಕುಟುಂಬದಿಂದ ಬಂದಳು. ಹೀಗಾಗಿ ಮಧ್ಯಮ ವರ್ಗದವರ ಒತ್ತಡದ ಬಗ್ಗೆ ನನಗೂ ಅರ್ಥವಾಗುತ್ತದೆ. ಆದರೆ ಪ್ರಸ್ತುತ ಸರ್ಕಾರವು ಅವರ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ ಎಂದು ಕೇಂದ್ರ ಬಜೆಟ್‌ಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಹೇಳಿದ್ದಾರೆ.
ಸೀತಾರಾಮನ್ ಅವರು ಫೆಬ್ರವರಿ 1 ರಂದು ಲೋಕಸಭೆಯಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ತೆರಿಗೆದಾರರಿಗೆ ರಿಲೀಫ್ ನೀಡುತ್ತದೆ ಎಂಬ ನಿರೀಕ್ಷೆಗಳಿವೆ.
ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಾರಪತ್ರಿಕೆಯಾದ ಪಾಂಚಜನ್ಯ ನಿಯತಕಾಲಿಕೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, "ನಾನೂ ಮಧ್ಯಮ ವರ್ಗದವಳು. ಹಾಗಾಗಿ ಮಧ್ಯಮ ವರ್ಗದ ಒತ್ತಡವನ್ನು ಅರ್ಥಮಾಡಿಕೊಳ್ಳಬಲ್ಲೆ. ಮಧ್ಯಮ ವರ್ಗದವರೊಂದಿಗೆ ನನ್ನನ್ನು ಗುರುತಿಸಿಕೊಳ್ಳುತ್ತೇನೆ ಎಂದರು.
ಪ್ರಸ್ತುತ ಮೋದಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ. ಅಲ್ಲದೆ, 5 ಲಕ್ಷದವರೆಗಿನ ಆದಾಯಕ್ಕೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದರು.
ದೇಶದ 27 ನಗರಗಳಲ್ಲಿ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜೀವನ ಸೌಕರ್ಯವನ್ನು ಉತ್ತೇಜಿಸಲು 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಕೇಂದ್ರ ಸಚಿವೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


