ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಏರಿಕೆ
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ. ಆದಾಗ್ಯೂ, ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮುಂಬೈನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 1,733.50 ರಿಂದ 1,740.50 ಕ್ಕೆ ಏರಿಕೆಯಾಗಿದ್ದು, ಚೆನ್ನೈನಲ್ಲಿ ಇದು 1,945 ರಿಂದ 1,952ಕ್ಕೆ ಮತ್ತು ಕೋಲ್ಕತ್ತಾದಲ್ಲಿ 1,895 ರಿಂದ 1,902 ಕ್ಕೆ ಏರಿಕೆಯಾಗಿದೆ.
ಕಳೆದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಸತತ ಎರಡು ಬಾರಿ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 172 ರೂಪಾಯಿಗಳಷ್ಟು ಕಡಿಮೆಗೊಳಿಸಿದರೆ, ಜೂನ್‌ನಲ್ಲಿ 83 ರೂಪಾಯಿ ಇಳಿಕೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


