ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ 677 ಹೊಸ ಪೆಟ್ರೋಲ್ ಪಂಪ್ ಸ್ಥಾಪನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ 677 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಿವೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 643 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 342 ಜಮ್ಮು ಪ್ರದೇಶದಲ್ಲಿ ಮತ್ತು 301 ಕಾಶ್ಮೀರದಲ್ಲಿ ಸ್ಥಾಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಲಡಾಖ್‌ನಲ್ಲಿ, ಒಟ್ಟು 34 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗುವುದು" ಎಂದು ಅವರು ಹೇಳಿದ್ದಾರೆ.
ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರವು ಒಟ್ಟು 646 ಇಂಧನ ಕೇಂದ್ರಗಳನ್ನು ಹೊಂದಿದೆ ಮತ್ತು ಲಡಾಖ್ 32 ಪೆಟ್ರೋಲ್ ಪಂಪ್‌ಗಳನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


