2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ
ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.
ಮೇ 23 ರಿಂದ ಸೆಪ್ಟೆಂಬರ್ 30ರ ವರೆಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.
"ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ" ಎಂದಿರುವ ಆರ್ ಬಿಐ, 2000 ರೂಪಾಯಿ ನೋಟ್ ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 20 ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು. ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕ್ಕೆ(ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.
ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 500 ರ ನೋಟು ಮತ್ತು 2,000 ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್ ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


