ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್ 30 ರವರೆಗೆ ಟೆಲ್ ಅವಿವ್ ಗೆ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ
ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.
ಅಕ್ಟೋಬರ್ 7 ರಿಂದ ಟೆಲ್ ಅವಿವ್ಗೆ ತೆರಳುವ ಮತ್ತು ಟೆಲ್ ಅವೀವ್ನಿಂದ ದೆಹಲಿಗೆ ಹಿಂದಿರುಗುವ ವಿಮಾನವನ್ನು ರದ್ದುಗೊಳಿಸಲಾಗಿದೆ.
ಇದನ್ನು ಓದಿ: ಏರ್ ಇಂಡಿಯಾ COO ಆಗಿ ಕ್ಲಾಸ್ ಗೋರ್ಷ್ ನೇಮಕ
ಇದೀಗ ನವೆಂಬರ್ 30 ರವರೆಗೆ ಟೆಲ್ ಅವಿವ್ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಏರ್ಲೈನ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಸಾಮಾನ್ಯವಾಗಿ ಏರ್ ಇಂಡಿಯಾ ವಿಮಾನಗಳು ವಾರದಲ್ಲಿ ಐದು ದಿನ ರಾಷ್ಟ್ರ ರಾಜಧಾನಿಯಿಂದ ಟೆಲ್ ಅವಿವ್ ಗೆ ಕಾರ್ಯಾಚರಣೆ ನಡೆಸುತ್ತವೆ. ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ವಿಮಾನ ಸೇವೆ ಇರುತಿತ್ತು.
ಕಳೆದ ತಿಂಗಳು ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಆರಂಭವಾದ ನಂತರ ಇಸ್ರೇಲ್ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಅಡಿಯಲ್ಲಿ ಕೆಲವು ಚಾರ್ಟರ್ಡ್ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


